ಮುಂಬೈ ಮೆಟ್ರೋ ದರ ಏರಿಕೆ ಪ್ರಸ್ತಾವನೆ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

ಮುಂಬೈ ಮೆಟ್ರೋ ಪ್ರಯಾಣ ದರ ಏರಿಕೆ ಪ್ರಸ್ತಾವನೆಯನ್ನು ಸೋಮವಾರ ಬಾಂಬೆ ಹೈಕೋರ್ಟ್ ರದ್ದುಗೊಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮುಂಬೈ: ಮುಂಬೈ ಮೆಟ್ರೋ ಪ್ರಯಾಣ ದರ ಏರಿಕೆ ಪ್ರಸ್ತಾವನೆಯನ್ನು ಸೋಮವಾರ ಬಾಂಬೆ ಹೈಕೋರ್ಟ್ ರದ್ದುಗೊಳಿಸಿದೆ.
ಮುಂಬೈ ಮೆಟ್ರೋದ ದರ ನಿಗದಿ ಸಮಿತಿ(ಎಫ್ಎಫ್ ಸಿ) ಪ್ರಯಾಣ ದರವನ್ನು 5 ರುಪಾಯಿ ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ದರ ಏರಿಕೆ ಪ್ರಸ್ತಾವನೆಯನ್ನು ರದ್ದುಗೊಳಿಸಿದೆ.
ಸದ್ಯ 11.4 ಕಿ.ಮೀ.ಮೆಟ್ರೋ ಪ್ರಯಾಣಕ್ಕೆ 10ರಿಂದ 40 ರುಪಾಯಿ ನಿಗದಿ ಮಾಡಲಾಗಿದೆ. 
ಈ ಮುಂಚೆ 2015ರಲ್ಲಿ ಸಲ್ಲಿಸಿದ್ದ ದರ ಏರಿಕೆ ಪ್ರಸ್ತಾವನೆಗೆ ಹೈಕೋರ್ಟ್ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಮುಂಬೈ ಮೆಟ್ರೋ ಒನ್ ಪ್ರೈವೇಟ್ ಲಿಮಿಟೆಡ್(ಎಂಎಂಒಪಿಎಲ್) ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com