ಶೆಹಜಾದ್ ಧ್ವನಿ ಅಡಗಿಸಲು ಕಾಂಗ್ರೆಸ್ ಯತ್ನ ಹೇಳಿಕೆ: ಪ್ರಧಾನಿಗೆ ಶೆಹಜಾದ್ ಧನ್ಯವಾದ

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಬಗ್ಗೆ ಫಿಕ್ಸಿಂಗ್ ಆರೋಪ ಮಾಡಿದ್ದ ಮಹಾರಾಷ್ಟ್ರದ ಶೆಹಜಾದ್ ಪೂನಾವಾಲ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಪರವಾಗಿ ಮಾತನಾಡಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.
ಶೆಹಜಾದ್ ಪೂನಾವಾಲ
ಶೆಹಜಾದ್ ಪೂನಾವಾಲ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಬಗ್ಗೆ ಫಿಕ್ಸಿಂಗ್ ಆರೋಪ ಮಾಡಿದ್ದ ಮಹಾರಾಷ್ಟ್ರದ ಶೆಹಜಾದ್ ಪೂನಾವಾಲ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಪರವಾಗಿ ಮಾತನಾಡಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. 
ರಾಹುಲ್ ಗಾಂಧಿ ಆಯ್ಕೆಯನ್ನು ಪ್ರಶ್ನಿಸಿದ್ದ ಮಹಾರಾಷ್ಟ್ರ ಕಾಂಗ್ರೆಸ್ ಬಂಡಾಯ ನಾಯಕ ಶೆಹಜಾದ್ ಪೂನಾವಾಲ, ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ನಿಜವಾದ ಚುನಾವಣೆಯಲ್ಲ ಅದೊಂದು ಸೆಲೆಕ್ಷನ್ ಪ್ರಕ್ರಿಯೆ ಓ ರಿಗ್ಗಿಂಗ್ ಮೂಲಕ ಅಧ್ಯಕ್ಷರ ಆಯ್ಕೆ ನಡೆಯುತ್ತದೆ, ಅದೊಂದು ಫಿಕ್ಸಿಂಗ್ ಎಂದು ಟೀಕಿಸಿದ್ದರು. 
ಶೆಹಜಾದ್ ಪೂನಾವಾಲ ಅವರ ಟೀಕೆಯನ್ನು ಗುಜರಾತ್ ನ ಸುರೇಂದ್ರ ನಗರ್ ನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಉಲ್ಲೇಖಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷದಲ್ಲಿಯೇ ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲ, ಇನ್ನು ದೇಶದಲ್ಲಿ ಹೇಗೆ ಪ್ರಜಾಪ್ರಭುತ್ವ ವ್ಯವ್ಯಸ್ಥೆಯನ್ನು ಹೇಗೆ ಜಾರಿಗೆ ತರುತ್ತೀರಾ? ಎಂದು ಪ್ರಶ್ನಿಸಿದ್ದರು. ಅಷ್ಟೇ ಅಲ್ಲದೇ  ಶೆಹಜಾದ್ ಪೂನಾವಾಲ ಅವರ ಧೈರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಹೊಗಳಿ  ಭಿನ್ನಮತೀಯ ನಾಯಕ ಶೆಹಜಾದ್ ರ ಧ್ವನಿ ಅಡಗಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ನಲ್ಲಿ ಶೆಹಜಾದ್ ಪೂನಾವಾಲ ಧನ್ಯವಾದ ತಿಳಿಸಿದ್ದು, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನ ಕುಟುಂಬ ರಾಜಕಾರಣ ತಮಗೆ ಅವಮಾನ ಮಾಡಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com