ಪ್ರಣಾಳಿಕೆ ಬಿಡುಗಡೆ ಮಾಡುತ್ತಿರುವ ಕಾಂಗ್ರೆಸ್ ನಾಯಕರು
ದೇಶ
ಗುಜರಾತ್ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ರೈತರ ಸಾಲ ಮನ್ನಾ, 16 ಗಂಟೆ ವಿದ್ಯುತ್ ಭರವಸೆ
ಗುಜರಾತ್ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಸೋಮವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು...
ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಸೋಮವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ರೈತರ ಸಾಲ ಮನ್ನಾ ಹಾಗೂ ನೀರಾವರಿಗೆ 16 ಗಂಟೆ ವಿದ್ಯುತ್ ನೀಡುವುದು ಸೇರಿದಂತೆ ಹಲವು ಭರವಸೆಗಳನ್ನು ಗುಜರಾತ್ ಜನತೆಗೆ ನೀಡಿದೆ.
ಕೆಲ ಪ್ರಮುಖ ಭರವಸೆಗಳು
- ರಾಜ್ಯದ 25 ಲಕ್ಷ ಯುವಕರಿಗೆ ಉದ್ಯೋಗ ಒದಗಿಸುವುದಕ್ಕಾಗಿ 32 ಸಾವಿರ ಕೋಟಿ ರುಪಾಯಿ ವಿಶೇಷ ಪ್ಯಾಕೇಜ್.
- ನಿರುದ್ಯೋಗಿ ಯುವಕರಿಗೆ 4 ಸಾವಿರ ರುಪಾಯಿ ಭತ್ಯೆ.
- ಗುತ್ತಿಗೆ ಆಧಾರಿತ ಸರ್ಕಾರಿ ನೌಕರಿ ರದ್ದು, ಈಗೀರುವ ಗುತ್ತಿಗೆ ನೌಕರರನ್ನು ಖಾಯಂಗೊಳಿಸುವುದು.
- ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳ ತ್ವರಿತ ವಿಚಾರಣೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್
- ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಮತ್ತು ಸ್ಮಾರ್ಟ್ ಫೋನ್
- ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 10 ರುಪಾಯಿ ಇಳಿಕೆ
- ಶಿಕ್ಷಣ ಮತ್ತು ಉದ್ಯೋಗದಲ್ಲಿ ಪಟಿದಾರ್ ಸಮುದಾಯಕ್ಕೆ ಸಮಾನ ಹಕ್ಕು
- ಎಸ್ಸಿ, ಎಸ್ಟಿ ಮತ್ತು ಒಬಿಸಿ ಈಗ ನೀಡಲಾಗಿರುವ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಇಲ್ಲ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ