ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭ್ರಷ್ಟಾಚಾರ ವಿರೋಧಿ ಜನಲೋಕಪಾಲ್ ಮಸೂದೆಯನ್ನು ದುರ್ಬಲಗೊಳಿಸಿದೆ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಆರೋಪಿಸಿದ್ದಾರೆ.
ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಕೈಗಾರಿಕೋದ್ಯಮಿಗಳ ಪರವಾಗಿರುವ ಪಕ್ಷಗಳಾಗಿವೆ, ಎಂದಿಗೂ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸಿಲ್ಲ ಎಂದಿರುವ ಅಣ್ಣಾ ಹಜಾರೆ 2018 ರ ಮಾರ್ಚ್ ನಿಂದ ಲೋಕ್ ಪಾಲ್ ಗಾಗಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.
ಬಲವಾದ ಲೋಕ್ ಪಾಲ್ ಮಸೂದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಮಾ.23 ರಿಂದ ಪ್ರತಿಭಟನೆ ನಡೆಸುವುದಾಗಿ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕ್ ಪಾಲ್ ರೂಪಿಸಿದಾಗ ಮನಮೋಹನ್ ಸಿಂಗ್ ಸರ್ಕಾರ ಮಸೂದೆಯನ್ನು ದುರ್ಬಲಗೊಳಿಸಿತ್ತು. ಆದರೆ ಈಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೂ ಸಹ ಅದನ್ನು ದುರ್ಬಲಗೊಳಿಸಿದೆ ಎಂದು ಅಣ್ಣಾ ಹಜಾರೆ ಆರೋಪಿಸಿದ್ದಾರೆ.