ಒಖಿ ಚಂಡಮಾರುತ: ಮುಂಬೈ ನಲ್ಲಿ 48 ಗಂಟೆಗಳ ಮಳೆ ಮುನ್ಸೂಚನೆ, ಶಾಲೆಗಳು ಬಂದ್

ಒಖಿ ಚಂಡಮಾರುತದ ಪರಿಣಾಮ ಮುಂಬೈ ನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇ ನಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ
ಮುಂಬೈ
ಮುಂಬೈ
ಮುಂಬೈ: ಒಖಿ ಚಂಡಮಾರುತದ ಪರಿಣಾಮ ಮುಂಬೈ ನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇ ನಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ ಎಂಬ ವರದಿಗಳಾಗಿವೆ. 
ಇದೇ ವೇಳೆ ಹವಾಮಾನ ಇಲಾಖೆ 48 ಗಂಟೆಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಿದೆ. ಕಳೆದ ರಾತ್ರಿ ಸುರಿಯುತ್ತಿದ್ದ ಮಳೆಯ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಮುಂಬೈ ನ ವೆಸ್ಟ್ರನ್-ಈಸ್ಟ್ರನ್ ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ಕಡಿಮೆಯಾಗಿದೆ. 
ಮುಂದಿನ 24 ಗಂಟೆಗಳಲ್ಲಿ ಮುಂಬೈ ನಲ್ಲಿ ಮತ್ತಷ್ಟು ಮಳೇಯಾಗಲಿದ್ದು ಮುಂಜಾಗೃತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com