ಮಲೆಯಾಳಂ ನಟಿ ಲೈಂಗಿಕ ದೌರ್ಜನ್ಯ ಪ್ರಕರಣ: ನಟ ದಿಲೀಪ್ ವಿರುದ್ಧದ ಚಾರ್ಜ್ ಶೀಟ್ ಒಪ್ಪಿದ ಕೇರಳ ಕೋರ್ಟ್

ದಕ್ಷಿಣ ಭಾರತದ ಖ್ಯಾತ ಮಲೆಯಾಳಂ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ....
ನಟ ದಿಲೀಪ್
ನಟ ದಿಲೀಪ್
ಕೊಚ್ಚಿ: ದಕ್ಷಿಣ ಭಾರತದ ಖ್ಯಾತ ಮಲೆಯಾಳಂ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಮಲೆಯಾಳಂ ನಟ ದಿಲೀಪ್ ಅವರ ವಿರುದ್ಧ ಸಲ್ಲಿಸಿದ್ದ ಚಾರ್ಜ್ ಶೀಟ್ ಅನ್ನು ಕೇರಳ ವಿಚಾರಣಾ ಕೋರ್ಟ್ ಮಂಗಳವಾರ ಒಪ್ಪಿಕೊಂಡಿದೆ.
ದಿಲೀಪ್ ಹಾಗೂ ಅವರ ಮಾಜಿ ಪತ್ನಿ ಮಂಜು ವಾರಿಯರ್ ಸೇರಿದಂತೆ 12 ಮಂದಿ ವಿರುದ್ಧ ಎಸ್ ಐಟಿ ಸಲ್ಲಿಸಿದ್ದ ಚಾರ್ಜ್ ಶೀಟ್ ಅನ್ನು ಅಂಗಮಲ್ಯ ಮ್ಯಾಜಿಸ್ಟ್ರೇಟ್ ಕೋರ್ಟ್ ಇಂದು ಒಪ್ಪಿಕೊಂಡಿದೆ.
ನವೆಂಬರ್ 22ರಂದು ಎಸ್ ಐಟಿ ಅಧಿಕಾರಿಗಳು 650 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಪಲ್ಸರ್ ಸುನಿ ಅಲಿಯಾಸ್ ಸುನಿಲ್ ಕುಮಾರ್ ನನ್ನು ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ. ದಿಲೀಪ್ ಕಾಲ್ ಮಾಡಲು ಪಲ್ಸರ್ ಸುನಿಗೆ ಮೊಬೈಲ್ ನೀಡಿದ್ದ ಸಿವಿಲ್ ಪೊಲೀಸ್ ಅಧಿಕಾರಿ ಅನಿಶ್ ಮತ್ತು ಸುನಿಗೆ ಸಹಾಯ ಮಾಡಿದ ವಿಪಿನ್ ಲಾಲ್ ಅವರನ್ನು ಇತರೆ ಆರೋಪಿಗಳನ್ನಾಗಿ ಮಾಡಲಾಗಿದೆ.
ಚಾರ್ಜ್ ಶೀಟ್ ನಲ್ಲಿ 385 ಸಾಕ್ಷಿಗಳು ಮತ್ತು 12 ಗೌಪ್ಯ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ. ಈ ಪೈಕಿ ಚಿತ್ರೋದ್ಯಮದ 50 ಸಾಕ್ಷಿಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಮುಖ ಆರೋಪಿ ಪಲ್ಸರ್ ಸುನಿಯನ್ನು ಫೆ.23ರಂದು ಪೊಲೀಸರು ಬಂಧಿಸಿದ್ದರು. ಇದೇ ಪ್ರಕರಣ ಸಂಬಂಧ ನಟ ದಿಲೀಪ್ ಅವರನ್ನು ಸಹ ಕಳೆದ ಜುಲೈ10 ರಂದು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. 
ಪ್ರಕರಣ ಸಂಬಂಧ ಸುನೀಲ್ ಸೇರಿದಂತೆ ಇನ್ನಿತರೆ ಆರೋಪಿಗಳ ವಿರುದ್ಧ ಕೇರಳ ಪೊಲೀಸರು ಐಪಿಸಿ ಸೆಕ್ಸನ್ 342 (ಅಕ್ರಮ ಬಂಧನ), 366 (ಅಪಹರಣ ಅಥವಾ ಮಹಿಳೆಯ ಅಪಹರಣ), 376 (ಅತ್ಯಾಚಾರ, 506 (1) ಮತ್ತು 120 (ಬಿ) (ವಂಚನೆ)) ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com