ಅಯೋಧ್ಯೆ ತೀರ್ಪನ್ನು ಮುಂದೂಡುವಂತೆ ಮನವಿ ಮಾಡಿದ್ದ ಕಪಿಲ್ ಸಿಬಲ್ ಗೆ ಸುನ್ನಿ ಬೋರ್ಡ್ ತರಾಟೆ!

ಅಯೋಧ್ಯೆಯ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುನ್ನಿ ವಕ್ಫ್ ಬೋರ್ಡ್ ನ್ನು ಪ್ರತಿನಿಧಿಸುತ್ತಿರುವ ನ್ಯಾಯವಾದಿ ಕಪಿಲ್ ಸಿಬಲ್ ನ್ನು ಅವರ ಕಕ್ಷಿದಾರರೇ ತರಾಟೆಗೆ ತೆಗೆದುಕೊಂಡಿದ್ದಾರೆ.
ಕಪಿಲ್ ಸಿಬಲ್
ಕಪಿಲ್ ಸಿಬಲ್
ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುನ್ನಿ ವಕ್ಫ್ ಬೋರ್ಡ್ ನ್ನು ಪ್ರತಿನಿಧಿಸುತ್ತಿರುವ ನ್ಯಾಯವಾದಿ ಕಪಿಲ್ ಸಿಬಲ್ ನ್ನು ಅವರ ಕಕ್ಷಿದಾರರೇ ತರಾಟೆಗೆ ತೆಗೆದುಕೊಂಡಿದ್ದಾರೆ. 
ಡಿ.05 ರಂದು ಸುಪ್ರೀಂ ಕೋರ್ಟ್ ನಲ್ಲಿ ಪ್ರಾರಂಭವಾದ ವಿಚಾರಣೆಯ ವೇಳೆ ಕಪಿಲ್ ಸಿಬಲ್ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದ ಅಂತಿಮ ತೀರ್ಪನ್ನು 2019 ರ ಸಾರ್ವತ್ರಿಕ ಲೋಕಸಭಾ ಚುನಾವಣೆಯವರೆಗೆ ಮುಂದೂಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಿಡಿ ಕಾರಿರುವ ಸುನ್ನಿ ವಕ್ಫ್ ಬೋರ್ಡ್ ಕಪಿಲ್ ಸಿಬಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹೌದು ಕಪಿಲ್ ಸಿಬಲ್ ನಮ್ಮನ್ನು ಪ್ರತಿನಿಧಿಸುವ ವಕೀಲರು ಆದರೆ ಅವರು ರಾಜಕೀಯ ಪಕ್ಷವನ್ನೂ ಪ್ರತಿನಿಧಿಸುತ್ತಾರೆ. ನೆನ್ನೆ ಅವರು ಸುಪ್ರೀಂ ಕೋರ್ಟ್ ಗೆ ನೀಡಿರುವ ಹೇಳಿಕೆ ತಪ್ಪು, ನಮಗೆ ಸಮಸ್ಯೆಗೆ ಶೀಘ್ರ ಪರಿಹಾರ ಬೇಕು ಎಂದು  ಸುನ್ನಿ ವಕ್ಫ್ ಬೋರ್ಟ್ ನ ಮುಖ್ಯಸ್ಥ ಹಾಜಿ ಮೆಹಬೂಬ್ ಹೇಳಿದ್ದಾರೆ. 
ರಾಮ ಮಂದಿರ ವಿವಾದ ವಿಷಯದಲ್ಲಿ ಸುನ್ನಿ ವಕ್ಫ್ ಬೋರ್ಡ್ ನ್ನು ಪ್ರತಿನಿಧಿಸುತ್ತಿರುವ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಏಜೆಂಟ್ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಸುನ್ನಿ ವಕ್ಫ್ ಬೋರ್ಡ್ ಸಹ ಕಪಿಲ್ ಸಿಬಲ್ ಹೇಳಿಕೆಯನ್ನು ಆಕ್ಷೇಪಿಸಿದೆ. ಇದೇ ವೇಳೆ ಕಾಂಗ್ರೆಸ್ ಸಹ ಸ್ಪಷ್ಟನೆ ನೀಡಿದ್ದು ಕಪಿಲ್ ಸಿಬಲ್ ಅವರ ಹೇಳಿಕೆಗಳು ಪಕ್ಷದ ನಿಲುವನ್ನು ಪ್ರತಿನಿಧಿಸುವುದಿಲ್ಲ ಎಂದು ಹೇಳಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com