ಕೇಜ್ರಿವಾಲ್ ಮಾನಹಾನಿ ಪ್ರಕರಣ: ಬಿಜೆಪಿ ಸಂಸದ ಸುಭಾಶ್ ಚಂದ್ರಗೆ 'ಹೈ' ನೋಟಿಸ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಗರುವಾರ....
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಗರುವಾರ ಬಿಜೆಪಿ ರಾಜ್ಯಸಭಾ ಸದಸ್ಯ ಸುಭಾಶ್ ಚಂದ್ರ ಹಾಗೂ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ತಮ್ಮ ವಿರುದ್ಧದ ಕ್ರಿಮಿನಲ್ ಮಾನಹಾನಿ ಪ್ರಕರಣ ರದ್ದು ಕೋರಿ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಗೀತಾ ಧಿಂಗ್ರ ಸೇಹಗಲ್ ಅವರು, ಬಿಜೆಪಿ ಸಂಸದನಿಗೆ ಹಾಗೂ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ ಡಿಸೆಂಬರ್ 11ರಂದು ದೆಹಲಿ ಸಿಎಂ ಖುದ್ದು ಹಾಜರಾತಿಗೆ ವಿನಾಯ್ತಿ ನೀಡಿದ್ದಾರೆ.
ಕೇಜ್ರಿವಾಲ್ ವಿರುದ್ಧ ವಿಚಾರಣಾ ನ್ಯಾಯಾಲಯದ ಸಮನ್ಸ್ ಗೆ ತಡೆ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ಸೇಹಗಲ್ ಅವರು, ವಿಚಾರಣೆಯನ್ನು ಜನವರಿ 22ಕ್ಕೆ ಮುಂದೂಡಿದ್ದಾರೆ.
ಕಳೆದ ಮಾರ್ಚ್ 4ರಂದು ವಿಚಾರಣಾ ಕೋರ್ಟ್ ನೀಡಿದ್ದ ಸಮನ್ಸ್ ತಡೆ ನೀಡುವಂತೆ ಕೇಜ್ರಿವಾಲ್ ಅವರು ಮನವಿ ಮಾಡಿದ್ದರು.
ಕಳೆದ ವರ್ಷ ನವೆಂಬರ್ 7ರಂದು ಕೇಂದ್ರ ಸರ್ಕಾರ ನೋಟ್ ನಿಷೇಧಿಸಿದ ನಂತರ ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಜ್ರಿವಾಲ್ ವಿರುದ್ಧ ಚಂದ್ರ ಅವರು ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com