ಗುಜರಾತ್ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಮೇಲೆ ಉಗ್ರ ದಾಳಿಗೆ ಸಂಚು!

ತವರು ಗುಜರಾತ್ ನಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯಕ್ರಮಗಳಲ್ಲಿ ಸತತವಾಗಿ ಪಾಲ್ಗೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಉಗ್ರ ದಾಳಿ ನಡೆಸುವ ಕುರಿತು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ತವರು ಗುಜರಾತ್ ನಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯಕ್ರಮಗಳಲ್ಲಿ ಸತತವಾಗಿ ಪಾಲ್ಗೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಉಗ್ರ ದಾಳಿ ನಡೆಸುವ ಕುರಿತು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ರೋಡ್ ಶೋಗಳೇ ಉಗ್ರರ ಟಾರ್ಗೆಟ್ ಆಗಿದ್ದು, ಬೃಹತ್ ಪ್ರಮಾಣದಲ್ಲಿ ಜನಸ್ತೋಮ ಸೇರಿದ್ದಾಗ ದಾಳಿ ಮಾಡಲು ಸಂಚು ರೂಪಿಸಿದ್ದಾರೆ ಎಂದು ಐಬಿ ಎಚ್ಚರಿಕೆ ನೀಡಿದೆ. ಇನ್ನು ಉಗ್ರರ ಈ ಕಾರ್ಯಾಚರಣೆ ಲೋನ್ ವೋಲ್ಫ್ (ಒಂಟಿ ತೋಳ) ಕಾರ್ಯಾಚರಣೆ ಎಂದು ಹೆಸರಿಡಲಾಗಿದ್ದು, ಉಗ್ರನೋರ್ವ ದಾಳಿ ವೇಳೆ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕವಿಲ್ಲದೇ ತನಗಿಚ್ಛಿಸಿದಂತೆ ದಾಳಿ ಮಾಡುವುದಾಗಿದೆ. ಹೆಚ್ಚು ಪ್ರಮಾಣಲ್ಲಿ ಹಾನಿ ಮಾಡುವುದು ಈ ದಾಳಿಯ ಮುಖ್ಯ ಉದ್ದೇಶವಾಗಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಇನ್ನು ಇತ್ತೀಚೆಗಷ್ಟೇ ದೇಶದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು. ಈ ಶಂಕಿತ ಉಗ್ರರು ನೀಡಿರುವ ಮಾಹಿತಿ ಮೇರೆಗೆ ಅಧಿಕಾರಿಗಳು ಇಂತಹ ಮಾಹಿತಿಯನ್ನು ಕಲೆಹಾಕಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶದ ಮಥುರಾದಲ್ಲಿ ಉರೋಜ್ ಖಾನ್ ಎಂಬಾತನನ್ನು ಬಂಧಿಸಲಾಗಿತ್ತು. ಈತ ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುವ ಜವಾಬ್ದಾರಿ ಹೊಂದಿದ್ದ. ಇಸ್ಲಾಮಿಕ್ ಸ್ಟೇಟ್ ಮೂಲದ ಇಬ್ಬರು ಉಗ್ರರನ್ನು ಲೋನ್ ವೋಲ್ಫ್ ದಾಳಿಗೆ ನಿಯೋಜನೆ ಮಾಡಲಾಗಿದೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com