ಐಎಸ್ಐ ಗೆ ಪಠಾಣ್ ಕೋಟ್ ನಲ್ಲಿ ಪಿಕ್ ನಿಕ್ ಗೆ ಅವಕಾಶ ಕೊಟ್ಟಿದ್ದರು ಮೋದಿ: ಲಾಲು ಟ್ವೀಟ್

ಕಾಂಗ್ರೆಸ್ ವಿರುದ್ಧ ಪಾಕಿಸ್ತಾನದೊಂದಿಗೆ ಕೈ ಜೋಡಿಸಿರುವ ಆರೋಪ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್...
ಲಾಲು ಪ್ರಸಾದ್ ಯಾದವ್
ಲಾಲು ಪ್ರಸಾದ್ ಯಾದವ್
ಕಾಂಗ್ರೆಸ್ ವಿರುದ್ಧ ಪಾಕಿಸ್ತಾನದೊಂದಿಗೆ ಕೈ ಜೋಡಿಸಿರುವ ಆರೋಪ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಆರ್ ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್, ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಗೆ ಪಠಾಣ್ ಕೋಟ್ ನಲ್ಲಿ ಪಿಕ್ ನಿಗ್ ಗಾಗಿ ಅವಕಾಶ ಕೊಟ್ಟಿದ್ದರು ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ. 
ಪಠಾಣ್ ಕೋಟ್ ವಾಯುನೆಲೆಯಲ್ಲಿ ಭಯೋತ್ಪಾದಕ ದಾಳಿ ನಡೆದ ಬಳಿಕ ನೆರೆ ರಾಷ್ಟ್ರದ ಗುಪ್ತಚರ ಅಧಿಕಾರಿಗಳನ್ನು ಕರೆಸಿ ಪಿಕ್ ನಿಕ್ ಗೆ ಅವಕಾಶ ಕಲ್ಪಿಸಿದ್ದರು ಎಂದು ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಅಚ್ಚರಿಯ ಭೇಟಿ ನೀಡಿದ್ದು ಹಾಗೂ ಅದಕ್ಕೂ ಮುನ್ನ ಪಾಕ್ ಪ್ರಧಾನಿಯನ್ನು ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದನ್ನೂ ಲಾಲು ಪ್ರಸಾದ್ ಪ್ರಸ್ತಾಪಿಸಿದ್ದಾರೆ. 
ಗುಜರಾತ್ ನಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಪಾಕಿಸ್ತಾನದೊಂದಿಗೆ ಸೇರಿ ಷಡ್ಯಂತ್ರ ರೂಪಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದ ಬೆನ್ನಲ್ಲೇ ಲಾಲು ಪ್ರಾಸದ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವ್ಯಂಗ್ಯ ಧಾಟಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com