ಗುಜರಾತ್ ಅಂತಿಮ ಹಂತದ ಚುನಾವಣೆ: ಜನತೆಗೆ ಭಾವನಾತ್ಮಕ ಮನವಿ ಮಾಡಿದ ಮೋದಿ!

ಗುಜರಾತ್ ನ ವಿಧಾನಸಭಾ ಚುನಾವಣೆಗೆ ಡಿ.14 ರಂದು ಅಂತಿಮ ಹಂತದ ಮತದಾನ ನಡೆಯಲಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಜನತೆಗೆ ಭಾವನಾತ್ಮಕವಾಗಿ ಮನವಿ ಮಾಡಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ
Updated on: 
ನವದೆಹಲಿ: ಗುಜರಾತ್ ನ ವಿಧಾನಸಭಾ ಚುನಾವಣೆಗೆ ಡಿ.14 ರಂದು ಅಂತಿಮ ಹಂತದ ಮತದಾನ ನಡೆಯಲಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಜನತೆಗೆ ಭಾವನಾತ್ಮಕವಾಗಿ ಮನವಿ ಮಾಡಿದ್ದಾರೆ. 
ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ, ಗುಜರಾತ್ ನಲ್ಲಿಯೂ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಮತ್ತಷ್ತು ಬಲ ಬರುತ್ತದೆ. ಈ ವಿಷಯದಲ್ಲಿ 1+1=2 ಅಲ್ಲ, 1+1 11 ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದು ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಗುಜರಾತ್ ನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬಹುದು ಎಂದು ಮೋದಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. 
3 ವರ್ಷಗಳ ನಂತರ ಗುಜರಾತ್ ಗೆ ಭೇಟಿ ನೀಡುತ್ತಿದ್ದು, ಇಲ್ಲಿನ ಜನತೆ ಅತ್ಯಂತಪ್ರೀತಿ ತೋರಿದ್ದಾರೆ, ಅವರ ಪ್ರೀತಿ ಆದರಗಳು ನನಗೆ ಭಾರತದ ಅಭಿವೃದ್ಧಿಗೆ ಶ್ರಮಿಸಲು ಹೆಚ್ಚಿನ ಶಕ್ತಿ ನೀಡಲಿವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com