ಕಳೆದ ಸರ್ಕಾರದ ಅವಧಿಯಲ್ಲಿ ನಿರ್ದಿಷ್ಟ ಕೈಗಾರಿಕೋದ್ಯಮಿಗಳಿಗೆ ಸಾಲ ನೀಡುವುದಕ್ಕೆ ಬ್ಯಾಂಕ್ ಗಳ ಮೇಲೆ ಒತ್ತಡವಿತ್ತು, ಇದು ಸಾರ್ವಜನಿಕರ ಹಣದ ಲೂಟಿ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಬ್ಯಾಂಕ್ ಗಳಲ್ಲಿರುವ ಠೇವಣಿಗಳು ಸುರಕ್ಷಿತವಾಗಿರುತ್ತವೆ ಎಂದು ಭರವಸೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಸರ್ಕಾರದ ಪ್ರಸ್ತಾವಿತ ಎಫ್ಆರ್ ಡಿಐ ಬಿಲ್ ನ ಬಗ್ಗೆ ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಸರ್ಕಾರ ಬ್ಯಾಂಕ್ ವ್ಯವಸ್ಥೆಯನ್ನು ಬಲಿಷ್ಠಗೊಳಿಸಲು ಯತ್ನಿಸುತ್ತಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಎಫ್ ಆರ್ ಡಿಐ ಬಿಲ್ ಬಗ್ಗೆ ವದಂತಿಗಳನ್ನು ಹಬ್ಬಿಸಲಾಗುತ್ತಿದ್ದು, ಮಸೂದೆಯಲ್ಲಿರುವ ಅಂಶಗಳಿಗೆ ತದ್ವಿರುದ್ಧವಾದದ್ದನ್ನೇ ಹಬ್ಬಿಸಲಾಗುತ್ತಿದೆ. ಬ್ಯಾಂಕ್ ಗಳು ಹಾಗೂ ಅದರಲ್ಲಿರುವ ಠೇವಣಿಗಳನ್ನು ಸುರಕ್ಷಿತವಾಗಿರಿಸಲು ನಾವು ಯತ್ನಿಸುತ್ತಿದ್ದೇವೆ ಎಂದು ಮೋದಿ ಹೇಳಿದ್ದು ಬ್ಯಾಂಕ್ ಗಳಲ್ಲಿರುವ ಠೇವಣಿಗಳು ಸುರಕ್ಷಿತವಾಗಿರುತ್ತವೆ ಎಂದು ಭರವಸೆ ನೀಡಿದ್ದಾರೆ.