ಬಹುಕೋಟಿ ಕಲ್ಲಿದ್ದಲು ಹಗರಣ: ಜಾರ್ಖಂಡ್ ಮಾಜಿ ಸಿಎಂ ಮಧು ಕೋಡಾ ಸೇರಿ ನಾಲ್ವರು ಅಪರಾಧಿ

ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಸೇರಿದಂತೆ ನಾಲ್ವರ ವಿರುದ್ಧ ಆರೋಪ ಸಾಬೀತಾಗಿದ್ದು...
ಮಧು ಕೋಡಾ
ಮಧು ಕೋಡಾ
ನವದೆಹಲಿ: ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಸೇರಿದಂತೆ ನಾಲ್ವರ ವಿರುದ್ಧ ಆರೋಪ ಸಾಬೀತಾಗಿದ್ದು ಸಿಬಿಐ ವಿಶೇಷ ನ್ಯಾಯಾಲಯ ಅವರನ್ನು ದೋಷಿಗಳು ಎಂದು ಘೋಷಿಸಿದೆ. 
ಮಾಜಿ ಸಿಎಂ ಮಧು ಕೋಡಾ, ಕಲ್ಲಿದ್ದಲು ಕಾರ್ಯದರ್ಶಿ ಎಚ್ ಸಿ ಗುಪ್ತಾ, ಜಾರ್ಖಂಡ್ ಮಾಜಿ ಮುಖ್ಯ ಕಾರ್ಯದರ್ಶಿ ಅಶೋಕ್ ಕುಮಾರ್ ಬಸು ಅವರ ಮೇಲೆ ಕ್ರಿಮಿನಲ್ ಸಂಚು, ವಂಚನೆ, ಭ್ರಷ್ಟಾಚಾರ ಆರೋಪ ಹೊರಿಸಲಾಗಿತ್ತು. ಈ ಆರೋಪಗಳು ಸಾಬೀತಾಗಿದ್ದು ಅವರನ್ನೆಲ್ಲಾ ದೋಷಿ ಎಂದು ಘೋಷಿಸಿರುವ ನ್ಯಾಯಾಲಯ ನಾಳೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಲಿದೆ. 
ಜಾರಿ ನಿರ್ದೇಶನಾಲಯದ ಪ್ರಕಾರ ಸುಮಾರು 2500 ಕೋಟಿ ರುಪಾಯಿ ಅವ್ಯವಹಾರ ಆರೋಪ ಹೊರೆಸಲಾಗಿತ್ತು. ನಂತರ 3400 ಕೋಟಿ ಅಕ್ರಮ ಬಯಲಿಗೆಳೆಯಲಾಗಿತ್ತು. ಸಿಬಿಐ ತಂಡ ದೇಶಾದ್ಯಂತ ಸುಮಾರು 70 ಕಡೆಗಳಲ್ಲಿ ದಾಳಿ ನಡೆಸಿದ್ದರು. ಮಧುಕೋಡಾ ಅವರ ಸ್ಥಿರ ಹಾಗೂ ಚರಾಸ್ಥಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಮುಟ್ಟುಗೋಲು ಹಾಕಿಕೊಂಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com