ಕಪ್ಪು ಬಣ್ಣಕ್ಕೆ ತಿರುಗಿದ ಬ್ರಹ್ಮಪುತ್ರ ನದಿ: ಚೀನಾ ವಿದೇಶಾಂಗ ಸಚಿವರೊಂದಿಗೆ ಆತಂಕ ವ್ಯಕ್ತಪಡಿಸಿದ ಎಂಇಎ

ಬ್ರಹ್ಮಪುತ್ರ ನದಿ ಕಪ್ಪು ಬಣ್ಣಕ್ಕೆ ತಿರುಗುತ್ತಿರುವುದರ ಬಗ್ಗೆ ಭಾರತದ ವಿದೇಶಾಂಗ ಸಚಿವಾಲಯ ಚೀನಾದ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು ಆತಂಕ ವ್ಯಕ್ತಪಡಿಸಿದೆ.
ಬ್ರಹ್ಮಪುತ್ರ
ಬ್ರಹ್ಮಪುತ್ರ
ನವದೆಹಲಿ: ಬ್ರಹ್ಮಪುತ್ರ ನದಿ ಕಪ್ಪು ಬಣ್ಣಕ್ಕೆ ತಿರುಗುತ್ತಿರುವುದರ ಬಗ್ಗೆ ಭಾರತದ ವಿದೇಶಾಂಗ ಸಚಿವಾಲಯ ಚೀನಾದ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು ಆತಂಕ ವ್ಯಕ್ತಪಡಿಸಿದೆ. 
ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಎಂಇಎ ವಕ್ತಾರ ರವೀಶ್ ಕುಮಾರ್, ಬ್ರಹ್ಮಪುತ್ರ ನದಿ ಕಪ್ಪು ಬಣ್ಣಕ್ಕೆ ತಿರುಗಿರುವುದು ಆತಂಕದ ಸಂಗತಿಯಾಗಿದ್ದು, ಈ ವಿಷಯವನ್ನು ಚೀನಾದ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದೇವೆ ಎಂದು ಹೇಳಿದ್ದಾರೆ. 
ಬ್ರಹ್ಮಪುತ್ರ ನದಿಗೆ ಸಂಬಂಧಿಸಿದಂತೆ ಜಲಸಂಪನ್ಮೂಲ ಇಲಾಖೆಯೊಂದಿಗೂ ಸಹಕರಿಸುತ್ತಿದ್ದೇವೆ ಎಂದು ರವೀಶ್ ಕುಮಾರ್ ಹೇಳಿದ್ದಾರೆ. ಚೀನಾ ವಿದೇಶಾಂಗ ಸಚಿವರನ್ನು ಭೇಟಿ ಮಾಡಿದ ವೇಳೆ ಸುಷ್ಮಾ ಸ್ವರಾಜ್ ಅವರು ಬ್ರಹ್ಮಪುತ್ರ ನದಿ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಿದ್ದಾರೆ. 
ಬ್ರಹ್ಮಪುತ್ರ ನದಿಯಲ್ಲಿ ವಿಷಕಾರಿ ಅಂಶಗಳು ಹೆಚ್ಚುತ್ತಿರುವುದಕ್ಕೆ ಕಾರಣವೇನೆಂಬುದನ್ನು ತಿಳಿದುಕೊಳ್ಳುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನಿರ್ದೇಶನ ನೀಡಿದ ಬೆನ್ನಲ್ಲೇ ಎಂಇಎ ಹೇಳಿಕೆಯನ್ನು ಬಿಡುಗಡೆ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com