ಕಾಶ್ಮೀರ: ಮದುವೆ ದಿನವೇ ಶಿಕ್ಷಕ ದಂಪತಿ ವಜಾ, ‘ರೊಮ್ಯಾನ್ಸ್’ಮಕ್ಕಳ ಮೇಲೆ ಪರಿಣಾಮ ಬೀರುತ್ತೆ ಎಂದ ಶಾಲೆ

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕ ಜೋಡಿಯನ್ನು ಅವರ ಮದುವೆಯ ದಿನವೇ ಕೆಲಸದಿಂದ ವಜಾ ಮಾಡಲಾಗಿದ್ದು, ಈ ಜೋಡಿಯ ರೊಮ್ಯಾನ್ಸ್ ನಿಂದ ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಶಾಲಾ ಆಡಳಿತ ಮಂಡಳಿ ಕಾರಣ ನೀಡಿದೆ.
ಪುಲ್ವಾಮಾದ ಟ್ರಾಲ್ ಟೌನ್ ನಿವಾಸಿಗಳಾದ ರಾತಿಖ್ ಭಟ್ ಹಾಗೂ ಸುಮಾಯಾ ಬಶೀರ್ ಕೆಲಸದಿಂದ ವಜಾಗೊಂಡಿರೋ ನವ ದಂಪತಿಗಳಾಗಿದ್ದು, ಈ ಇಬ್ಬರೂ ಕಳೆದ ಹಲವು ವರ್ಷಗಳಿಂದ ಪಾಂಫೋರ್ ಮುಸ್ಲಿಂ ಶಿಕ್ಷಣ ಸಂಸ್ಥೆಯಲ್ಲಿ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಕ್ರಮವಾಗಿ ಕೆಲಸ ಮಾಡುತ್ತಿದ್ದರು. ಆದ್ರೆ ಇದ್ದಕ್ಕಿದ್ದಂತೆ ನವೆಂಬರ್ 30 ರಂದು ನಮ್ಮ ಮದುವೆ ನಡೆದ ದಿನವೇ ಶಾಲೆಯವರು ನಮ್ಮನ್ನು ಕೆಲಸದಿಂದ ತೆಗೆದುಹಾಕಿದ್ದಾರೆಂದು ದಂಪತಿ ಆರೋಪಿಸಿದ್ದಾರೆ.
ಈ ಬಗ್ಗೆ ಶಾಲೆಯ ಪ್ರಿನ್ಸಿಪಲ್ ಯಾವುದೇ ಹೇಳಿಕೆ ನೀಡಲು ನಿರಾಕರಿಸಿದ್ದಾರೆ. ಆದರೆ ಶಾಲೆಯ ಅಧ್ಯಕ್ಷರಾದ ಬಶೀರ್ ಮಸೂದಿ ಪ್ರತಿಕ್ರಿಯೆ ನೀಡಿದ್ದು, ಇವರಿಬ್ಬರೂ ಮದುವೆಗೆ ಮುಂಚೆ ರೊಮ್ಯಾಂಟಿಕ್ ರಿಲೇಷನ್‍ಶಿಪ್‍ನಲ್ಲಿ ಇದ್ದ ಕಾರಣ ಕೆಲಸದಿಂದ ತೆಗೆಯಲಾಗಿದೆ ಎಂದು ಹೇಳಿದ್ದಾರೆ.
ಶಾಲೆಯಲ್ಲಿ ಎರಡು ಸಾವಿರ ಮಕ್ಕಳಿದ್ದು, 200 ಸಿಬ್ಬಂದಿ ಕೆಲಸ ಮಾಡುತ್ತಾರೆ. ಈ ಜೋಡಿಯ ರೊಮ್ಯಾನ್ಸ್‍ನಿಂದ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಮಸೂದಿ ಹೇಳಿದ್ದಾರೆ.
ತಮ್ಮ ಮದುವೆ ಹಿರಿಯರು ನಿಶ್ಚಯಿಸಿದ್ದು, ನಮ್ಮದು ಅರೇಂಜ್ಡ್ ಮ್ಯಾರೇಜ್. ಕೆಲವು ತಿಂಗಳ ಹಿಂದೆಯಷ್ಟೇ ನಮ್ಮ ನಿಶ್ಚಿತಾರ್ಥವಾಗಿತ್ತು. ನಂತರ ಶಾಲಾ ಸಿಬ್ಬಂದಿಗೆ ಪಾರ್ಟಿ ಕೊಟ್ಟಿದ್ದರಿಂದ ವಿಷಯ ಶಾಲೆಯ ಎಲ್ಲಾ ಆಡಳಿತ ಮಂಡಳಿವರಿಗೆ ಗೊತ್ತಿತ್ತು ಎಂದು ರಾತಿಖ್ ಭಟ್ ಹೇಳಿದ್ದಾರೆ. ಒಂದು ವೇಳೆ ನಮ್ಮ ಸಂಬಂಧದಿಂದ ಈ ರೀತಿ ಆಗುತ್ತಿದೆ ಎಂದಾದರೆ ಆ ಬಗ್ಗೆ ವಿವರಣೆ ನೀಡಲು ಶಾಲೆಯವರು ಯಾಕೆ ಅವಕಾಶ ನೀಡಲಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


