ಇನ್ನು ಇದಲ್ಲದೆ ತ್ರಿವಳಿ ತಲಾಕ್, ಜಿಎಸ್‌ಟಿ, ನೋಟು ಅಮಾನ್ಯೀಕರಣ, ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ, ಜಮ್ಮು-ಕಾಶ್ಮೀರದಲ್ಲಿನ ಪರಿಸ್ಥಿತಿ ವಿಷಯಗಳು ಸಂಸತ್ ನಲ್ಲಿ ಪ್ರತಿಧ್ವನಿಸುವ ನಿರೀಕ್ಷೆ ಇದೆ. 22 ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಕ್ರಿಸ್ ಮಸ್ ಸೇರಿದಂತೆ ರಜಾ ದಿನಗಳನ್ನು ಹೊರತುಪಡಿಸಿ 14 ದಿನಗಳ ಕಾಲ ಕಲಾಪ ನಡೆಯಲಿದ್ದು, ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ಸಂಸತ್ತಿನ ಉಭಯ ಸದನಗಳು ಸಾಕ್ಷಿಯಾಗಲಿವೆ.