ತ್ರಿವಳಿ ತಲಾಖ್ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅಸ್ತು

ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದು, ಇದೀಗ ಅದನ್ನು ಕಾನೂನಾತ್ಮಕವಾಗಿ ಸಂಪೂರ್ಣ ತೆಗೆದು ಹಾಕಲು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದು, ಇದೀಗ ಅದನ್ನು ಕಾನೂನಾತ್ಮಕವಾಗಿ ಸಂಪೂರ್ಣ ತೆಗೆದು ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ತಿದ್ದುಪಡಿ ಮಸೂದೆಯನ್ನು ಸಿದ್ಧಪಡಿಸಿದ್ದು, ಅದಕ್ಕೆ ಶುಕ್ರವಾರ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಕಳೆದ ಆಗಸ್ಟ್ 22ರಂದು ಸುಪ್ರೀಂ ಕೋರ್ಟ್‌ ಮುಸ್ಲಿಮರಲ್ಲಿ ಜಾರಿ ಇರುವ ವಿವಾಹ ವಿಚ್ಛೇದನ ಪದ್ದತಿಯಾದ ತ್ರಿವಳಿ ತಲಾಖ್ ಅನ್ನು ಆರು ತಿಂಗಳ ಕಾಲ ನಿಷೇಧಿಸಿತ್ತು. ಅಲ್ಲದೆ ಈ ಸಂಬಂಧ ಶಾಸನ ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಕಾನೂನು ಇಲಾಖೆ ಸಿದ್ಧಪಡಿಸಿದ್ದ ತ್ರಿವಳಿ ತಲಾಖ್ ತಿದ್ದುಪಡಿ ಮಸೂದೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಕೇಂದ್ರ ಸಂಪುಟ ಒಪ್ಪಗೆ ನೀಡಿದ್ದು, ಅದನ್ನು ಇಂದಿನಿಂದ ಆರಂಭವಾಗಿರುವ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುತ್ತಿದೆ.
ಮಸೂದೆಯಲ್ಲಿ ತ್ರಿವಳಿ ತಲಾಖ್ ಅಪರಾಧ ಎಂದು ಘೋಷಿಸಲಾಗಿದ್ದು, ತಲಾಖ್ ನೀಡುವ ಪುರುಷರಿಗೆ ದಂಡ, ಮೂರು ವರ್ಷ ಜೈಲು ಶಿಕ್ಷೆ ಹಾಗೂ ಮಹಿಳೆಯರಿಗೆ ಪರಿಹಾರ ನೀಡಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ.
ಸುಪ್ರೀಂ ಆದೇಶ ಜಾರಿಗೆ ಬಂದ ನಂತರವೂ ಕೆಲವು ಕಡೆ ತ್ರಿವಳಿ ತಲಾಖ್‌ ಸಂಪ್ರದಾಯದಂತೆ ಮುಸ್ಲಿಂ ಮಹಿಳೆಯರಿಗೆ ವಿಚ್ಛೇದನ ನೀಡಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈ ನಿಟ್ಟಿನಲ್ಲಿ ಇದಕ್ಕೆ ಕಾನೂನು ರೂಪಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರ ಮಸೂದೆ ಸಿದ್ಧಪಡಿಸಲು ಸಚಿವರ ಸಮಿತಿ ರಚಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com