ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು ವಿಪಕ್ಷಗಳಿಗೆ ಮನವಿ ಮಾಡಿದ್ದು, ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ವಿಪಕ್ಷಗಳಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸುಗಮ ಕಲಾಪಕ್ಕೆ ಎಲ್ಲ ಪಕ್ಷಗಳ ಸಹಕಾರ ಅಗತ್ಯ. ಪ್ರಮುಖವಾಗಿ ವಿಪಕ್ಷಗಳು ಸುಗಮ ಕಲಾಪಕ್ಕಾಗಿ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಇದಕ್ಕೂ ಮೊದಲು ಗುರವಾರ ಅಂದರೆ ಸಂಸತ್ ಕಲಾಪ ಆರಂಭಕ್ಕೂ ಮುನ್ನ ನಡೆದ ಸರ್ವಪಕ್ಷಗಳ ಸಭೆಯಲ್ಲೂ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಪ್ರತಿಪಕ್ಷಗಳಿಗೆ ಮನವಿ ಮಾಡಿಕೊಂಡರು.