ಸೋನಿಯಾ ಪಕ್ಷದ ಅಧ್ಯಕ್ಷ ಸ್ಥಾನದಿಂದ ನಿವೃತ್ತರಾಗಿದ್ದಾರೆ, ರಾಜಕೀಯದಿಂದಲ್ಲ: ಕಾಂಗ್ರೆಸ್

ರಾಹುಲ್ ಗಾಂಧಿ ಡಿ.16 ರಂದು ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದು, ಸೋನಿಯಾ ಗಾಂಧಿ "ಈಗ ನನ್ನದು ನಿವೃತ್ತಿಯ ಹಾದಿ" ಎಂದು ಹೇಳಿದ್ದರ ಬಗ್ಗೆ ವರದಿ ಪ್ರಕಟವಾಗಿತ್ತು.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
ನವದೆಹಲಿ: ರಾಹುಲ್ ಗಾಂಧಿ ಡಿ.16 ರಂದು ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದು, ಸೋನಿಯಾ ಗಾಂಧಿ "ಈಗ ನನ್ನದು ನಿವೃತ್ತಿಯ ಹಾದಿ" ಎಂದು ಹೇಳಿದ್ದರ ಬಗ್ಗೆ ವರದಿ ಪ್ರಕಟವಾಗಿತ್ತು. ಈ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪಕ್ಷದ ವಕ್ತಾರ ರಣ್ದೀಪ್ ಸುರ್ಜೆವಾಲ, ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನದಿಂದ ನಿವೃತ್ತರಾಗಿದ್ದಾರೆ. ರಾಜಕೀಯದಿಂದ ಅಲ್ಲ ಎಂದು ಹೇಳಿದ್ದಾರೆ. 
ಸೋನಿಯಾ ಗಾಂಧಿ ಅವರು ರಾಜಕೀಯದಿಂದ ನಿವೃತ್ತರಾಗುತ್ತಿಲ್ಲ, ಕಾಂಗ್ರೆಸ್ ನ ಸಿದ್ಧಾಂತಕ್ಕೆ ಅವರ ಬದ್ಧತೆ, ಬುದ್ಧಿವಂತಿಕೆ ಎಂದಿಗೂ ದಾರಿ ದೀಪವಾಗಿರಲಿದೆ ಎಂದು ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೆವಾಲ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಈಗ ನನ್ನದು ನಿವೃತ್ತಿಯ ಹಾದಿ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com