ಅಂತೆಯೇ ಈ ಹಿಂದೆ ಕೇಂದ್ರ ಸರ್ಕಾರ ಹೊರಡಿಸಿರುವ ಮೂರು ಸುಗ್ರೀವಾಜ್ಞೆಗಳನ್ನು ವಿಧೇಯಕಗಳನ್ನಾಗಿ ಮಂಡಿಸಿ ಅನುಮೋದನೆ ಪಡೆಯಲು ಚಿಂತನೆ ನಡೆಸಿದೆ. ಇತ್ತ ಪ್ರತಿಪಕ್ಷಗಳು ತ್ರಿವಳಿ ತಲಾಕ್, ಜಿಎಸ್ ಟಿ, ಎಲ್ಪಿಜಿ ಸಬ್ಸಿಡಿ ಕಡಿತ, ರೈತರ ಸಂಕಷ್ಟ, ಜಮ್ಮು-ಕಾಶ್ಮೀರದಲ್ಲಿನ ಪರಿಸ್ಥಿತಿ ಸೇರಿದಂತೆ ಅನೇಕ ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಹಣಿಯಲು ಸಜ್ಜಾಗಿವೆ.