ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ: ಕಾಂಗ್ರೆಸ್ ಮುಖ್ಯ ಕಚೇರಿಯ ಹೊರಗೆ ಸಂಭ್ರಮಾಚರಣೆ

ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಅತ್ತ ದೆಹಲಿಯ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ಕಾಂಗ್ರೆಸ್ ಕಚೇರಿ ಬಳಿ ಕಾರ್ಯಕರ್ತರ ಸಂಭ್ರಮ
ಕಾಂಗ್ರೆಸ್ ಕಚೇರಿ ಬಳಿ ಕಾರ್ಯಕರ್ತರ ಸಂಭ್ರಮ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಅತ್ತ ದೆಹಲಿಯ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ರಾಹುಲ್ ಗಾಂಧಿಗೆ ಪಟ್ಟ ಹಿನ್ನಲೆಯಲ್ಲಿ ದೆಹಲಿಯ ಅಕ್ಬರ್ ರೋಡ್‌ನಲ್ಲಿರುವ ಕಾಂಗ್ರೆಸ್ ಮುಖ್ಯ ಕಚೇರಿಯ ಹೊರಭಾಗದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚಿ ಸಂಭ್ರಮಾಚರಣೆ ಮಾಡಿದರು. ಅಂತೆಯೇ  ರಾಹುಲ್ ಗಾಂಧಿ ಪರ ಘೋಷಣೆಗಳನ್ನು ಕೂಗಿದರು. ಕಾಂಗ್ರೆಸ್‌ ನ ಹಿರಿಯ ನಾಯಕರು ಪಕ್ಷದ ಕಚೇರಿಯತ್ತ ತೆರಳುತ್ತಿದ್ದು, ಯೂತ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಸಂಭ್ರಮ ಕಳೆ ಕಟ್ಟಿತ್ತು. ಕಚೇರಿಗೆ  ದೀಪಾಲಂಕಾರ ಮಾಡಲಾಗಿತ್ತು. 
ಇನ್ನು ಪಕ್ಷದ ಕಾರ್ಯಕರ್ತರು ಡ್ರಮ್ ನಾದಕ್ಕೆ ಮತ್ತು ಸಂಗೀತಕ್ಕೆ ಹೆಜ್ಜೆ ಹಾಕುವ ಮೂಲಕ ರಾಹುಲ್ ಗಾಂಧಿಗೆ ಸ್ವಾಗತ ಕೋರಿದರು. ರಾಹುಲ್ ಗಾಂಧಿ ಮನೆಯ ಹೊರಗೆ ಕಲಾವಿದರು ಹಾಗೂ ಬೆಂಬಲಿಗರಿಂದ ನೃತ್ಯ  ಕಾರ್ಯಕ್ರಮಗಳು ನಡೆದಿದ್ದು, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ, ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಗಳು, ಸಂಸದರು, ಹಿರಿಯ  ಕಾಂಗ್ರೆಸ್ ನಾಯಕರು ಹಾಗೂ ಎಲ್ಲ ಪಿಸಿಸಿ ಮುಖ್ಯಸ್ಥರು ಉಪಸ್ಥಿತಿರಿದ್ದರು.
ಸೋನಿಯಾ 1998ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. 132 ವರ್ಷ ಹಳೆಯ ಪಕ್ಷದ ಅಧ್ಯಕ್ಷರಾಗಿ ಸುಮಾರು 2 ದಶಕಗಳ ಕಾಲ ಕಾರ್ಯನಿರ್ವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com