ಇಂಟರ್ ಪೋಲ್ ನ ಹಾಲಿ ಅಧ್ಯಕ್ಷ ಮೆಂಗ್ ಹಾಂಗ್ವೀಯಿ ಮೂಲತಃ ಚೀನಾದವರಾಗಿದ್ದು, ಅಲ್ಲದೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಆಪ್ತರಲ್ಲಿ ಒಬ್ಬರಾಗಿದ್ದಾರೆ. ಹೀಗಾಗಿ ಪ್ರಸ್ತುತ ಝಾಕಿರ್ ನಾಯ್ಕ್ ವಿರುದ್ಧದ ರೆಡ್ ಕಾರ್ನರ್ ನೋಟಿಸ್ ನೀಡಲು ಮೆಂಗ್ ಹಾಂಗ್ವೀಯಿ ನಿರಾಕರಿಸಿದ್ದಾರೆ. ವಿಶ್ವಸಂಸ್ಥೆಯಲ್ಲಿ ಈ ಹಿಂದೆ ಜೈಶ್ ಇ ಮೊಹಮದ್ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸುವ ಭಾರತ ಯತ್ನಕ್ಕೆ ಚೀನಾ ಅಡ್ಡಗಾಲು ಹಾಕಿತ್ತು. ಇದೀಗ ಮೆಂಗ್ ಹಾಂಗ್ವೀಯಿ ಮೂಲಕ ಝಾಕಿರ್ ನಾಯ್ಕ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ನೋಟಿಸ್ ಜಾರಿಗೂ ಅಡ್ಡಗಾಲು ಹಾಕಿದೆ. ಝಾಕಿರ್ ನಾಯ್ಕ್ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಲು ಪ್ರಯತ್ನಿಸುತ್ತಿದ್ದ ಕೇಂದ್ರ ಸರ್ಕಾರಕ್ಕೆ ಇದರಿಂದ ಭಾರೀ ಹಿನ್ನಡೆಯಾಗಿದೆ.