ರಾಜ್ಯಪಾಲರ ಮೂಲಕ ಸರ್ಕಾರ ನಡೆಸಲು ಬಿಜೆಪಿ ಯತ್ನ: ಕೇಜ್ರಿವಾಲ್

ದೆಹಲಿ ಸೇರಿದಂತೆ ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಹಾಗೂ ಲೆಫ್ಟಿನೆಂಟ್ ಗವರ್ನರ್ ಮೂಲಕ ಸರ್ಕಾರ ನಡೆಸಲು....
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on: 
ನವದೆಹಲಿ: ದೆಹಲಿ ಸೇರಿದಂತೆ ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಹಾಗೂ ಲೆಫ್ಟಿನೆಂಟ್ ಗವರ್ನರ್ ಮೂಲಕ ಸರ್ಕಾರ ನಡೆಸಲು ಬಿಜೆಪಿ ಯತ್ನಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಆರೋಪಿಸಿದ್ದಾರೆ.
ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳು ಚುನಾಯಿತ ಸರ್ಕಾರವನ್ನು ಧಿಕ್ಕರಿಸಿ ಸೂಚನೆಗಳನ್ನು ನೀಡುತ್ತಿದ್ದಾರೆ ಎಂದು ದೆಹಲಿ ಸಿಎಂ ಆರೋಪಿಸಿದ್ದಾರೆ.
ದೆಹಲಿ ಸೇರಿದಂತೆ ಪ್ರತಿಪಕ್ಷಗಳ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲೂ ಬಿಜೆಪಿ ರಾಜ್ಯಪಾಲರ ಮತ್ತು ಲೆಫ್ಟಿನೆಂಟ್ ಗವರ್ನರ್ ಮೂಲಕ ಸರ್ಕಾರ ನಡೆಸಲು ಯತ್ನಿಸುತ್ತಿದೆ. ಲೆಫ್ಟಿನೆಂಟ್ ಗವರ್ನರ್ ಗಳು ಮತ್ತು ಗವರ್ನರ್ ಗಳು ಚುನಾಯಿತ ಸರ್ಕಾರಗಳನ್ನು ಧಿಕ್ಕರಿಸಿ ಅಧಿಕಾರಿಗಳ ಸಭೆ ಕರೆದು ಸೂಚನೆ ನೀಡುತ್ತಿದ್ದಾರೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹಿಂದೆ ಹಲವು ಬಾರಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು ಮತ್ತು ತಮ್ಮ ಸರ್ಕಾರದಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com