ವಿದ್ಯಾರ್ಥಿನಿಯನ್ನು ತಬ್ಬಿಕೊಂಡ ವಿದ್ಯಾರ್ಥಿಗೆ ಶಾಲೆಯಿಂದ ಉಚ್ಛಾಟನೆ ಶಿಕ್ಷೆ

ಸ್ಪರ್ಧೆಯಲ್ಲಿ ಗೆದ್ದ ವಿದ್ಯಾರ್ಥಿನಿಯನ್ನು ತಬ್ಬಿಕೊಂಡಿದ್ದಕ್ಕೆ 12ನೇ ತರಗತಿ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ ಹೊರಹಾಕಿರುವ ಘಟನೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ತಿರುವನಂತಪುರಂ: ಸ್ಪರ್ಧೆಯಲ್ಲಿ ಗೆದ್ದ ವಿದ್ಯಾರ್ಥಿನಿಯನ್ನು ತಬ್ಬಿಕೊಂಡಿದ್ದಕ್ಕೆ 12ನೇ ತರಗತಿ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ ಹೊರಹಾಕಿರುವ ಘಟನೆ ತಿರುವನಂತಪುರಂನಲ್ಲಿ ನಡೆದಿದೆ. 
ಈ ಸಂಬಂಧ ಉಚ್ಛಾಟನೆಗೊಂಡಿರುವ 12ನೇ ತರಗತಿ ವಿದ್ಯಾರ್ಥಿಯ ಪೋಷಕರು ಮುಕ್ಕೋಳಂ ನ ಸೆಂಟ್ ಥಾಮಸ್ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿಯ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ತೀರ್ಮನಿಸಿದ್ದಾರೆ. 
ಜೂಲೈ 21ರಂದು ಈ ಘಟನೆ ನಡೆದಿದ್ದು ವಿದ್ಯಾರ್ಥಿನಿಯೊಂದಿಗಿನ ಫೋಟೋವನ್ನು ವಿದ್ಯಾರ್ಥಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಅಪ್ಲೋಡ್ ಮಾಡುವ ಮೂಲಕ ಶಾಲೆಯ ಶಿಸ್ತಿನ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದು ಈ ಸಂಬಂಧ ಆತನನ್ನು ಶಾಲೆಯಿಂದ ಹೊರಹಾಕಲಾಗಿದೆ ಎಂದು ಶಾಲೆಯ ಕಾರ್ಯದರ್ಶಿ ರಾಜನ್ ವರ್ಗೀಸ್ ಹೇಳಿದ್ದಾರೆ. 
ಈ ಪ್ರಕರಣ ಸಂಬಂಧ ಕೇರಳ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ ವಿದ್ಯಾಭ್ಯಾಸ ಮುಂದುವರಿಸಲು ವಿದ್ಯಾರ್ಥಿಗೆ ಶಾಲೆಗೆ ಬರಲು ಅನುವು ಮಾಡಿಕೊಡಬೇಕು ಎಂದು ಅಕ್ಟೋಬರ್ 4ರಂದು ಆದೇಶಿಸಿತ್ತು. ಈ ಆದೇಶವನ್ನು ಶಾಲಾ ಆಡಳಿತ ಮಂಡಳಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಆಯೋಗ ಆದೇಶವನ್ನು ಹೈಕೋರ್ಟ್ ನ ಏಕಸದಸ್ಯ ಪೀಠ ಡಿಸೆಂಬರ್ 12 ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಪೋಷಕರು ಹೈಕೋರ್ಟ್ ನ ವಿಭಾಗೀಯ ಪೀಠಕ್ಕೆ ಮನವಿ ಮಾಡಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com