ಧಾರ್ಮಿಕ ಅಲ್ಪಸಂಖ್ಯಾತರು ಪಾಕ್ ಬಾಂಗ್ಲಾಗಳಿಗಿಂತ ಭಾರತದಲ್ಲಿ ಸುರಕ್ಷಿತ: ತಸ್ಲಿಮಾ ನಸ್ರೀನ್

ಧಾರ್ಮಿಕ ಅಲ್ಪಸಂಖ್ಯಾತರು ಪಾಕಿಸ್ತಾನ ಹಾಗೂ ಬಾಂಗ್ಲಾಗಳಿಗಿಂತ ಭಾರತದಲ್ಲಿ ಸುರಕ್ಷಿತರಾಗಿದ್ದಾರೆ ಎಂದು ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾ ದೇಶದ ಮೂಲದ ಲೇಖಕಿ ತಸ್ಲಿಮಾ ನಸ್ರೀನ್...
ತಸ್ಲೀಮಾ ನಸ್ರೀನ್
ತಸ್ಲೀಮಾ ನಸ್ರೀನ್
ಇಂದೋರ್: ಧಾರ್ಮಿಕ ಅಲ್ಪಸಂಖ್ಯಾತರು ಪಾಕಿಸ್ತಾನ ಹಾಗೂ ಬಾಂಗ್ಲಾಗಳಿಗಿಂತ ಭಾರತದಲ್ಲಿ ಸುರಕ್ಷಿತರಾಗಿದ್ದಾರೆ ಎಂದು ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾ ದೇಶದ ಮೂಲದ ಲೇಖಕಿ ತಸ್ಲಿಮಾ ನಸ್ರೀನ್ ಅಭಿಪ್ರಾಯಪಟ್ಟಿದ್ದಾರೆ. 
ಬಾಂಗ್ಲಾದೇಶದಲ್ಲಿ ಹಿಂದೂಗಳು ಹಾಗೂ ಬೌದ್ಧರ ಮೇಲೆ ದಾಳಿ ನಡೆಯುತ್ತಿದೆ ಎಂದು ತಸ್ಲಿಮಾ ನಸ್ರೀನ್ ಆರೋಪಿಸಿದ್ದಾರೆ. " ನಾನು ಪಾಕಿಸ್ತಾನಕ್ಕೆ ಈ ವರೆಗೂ ಭೇಟಿ ನೀಡಿಲ್ಲವಾದರೂ ಮತಾಂತರಕ್ಕಾಗಿ ಧಾರ್ಮಿಕ ಅಲ್ಪಸಂಖ್ಯಾತರು ಕಿರುಕುಳ ಅನುಭವಿಸುತ್ತಿರುವುದನ್ನು ಓದಿದ್ದೇನೆ ಎಂದು ಪಿಟಿಐ ಗೆ ನೀಡಿರುವ ಸಂದರ್ಶನದಲ್ಲಿ ತಸ್ಲಿಮಾ ನಸ್ರೀನ್ ಹೇಳಿದ್ದಾರೆ. 
ಇಂದೋರ್ ನ ಸಾಹಿತ್ಯ ಹಬ್ಬದಲ್ಲಿ ಭಾಗವಹಿಸಿ ಮಾತನಾಡಿರುವ ತಸ್ಲೀಮಾ ನಸ್ರೀನ್, ಪಾಕಿಸ್ತಾನ, ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತರಿಗಿಂತ ಭಾರತದಲ್ಲಿರುವ ಅಲ್ಪಸಂಖ್ಯಾತರು ಅತ್ಯಂತ ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com