ಗುಜರಾತ್ ವಿಧಾನಸಭೆಯ ಮೊದಲ ಫಲಿತಾಂಶ ಪ್ರಕಟ: ಬಿಜೆಪಿ ಅಭ್ಯರ್ಥಿ ಗೆಲುವು
ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಫಲಿತಾಂಶ ಪ್ರಕಟಗೊಂಡಿದ್ದು, ಮಜುರಾ ಕ್ಷೇತ್ರದ ಬಿಜೆಪಿಯ ಹರ್ಷ ಸಂಘಾವಿ ಕಾಂಗ್ರೆಸ್ ನ ತಮ್ಮ ಪ್ರತಿಸ್ಪರ್ಧಿಯಿಂದ 30 ಸಾವಿರ ಮತಗಳ ಅಂತರದಿಂದ ಗೆಲುವು
ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಫಲಿತಾಂಶ ಪ್ರಕಟಗೊಂಡಿದ್ದು, ಮಜುರಾ ಕ್ಷೇತ್ರದ ಬಿಜೆಪಿಯ ಹರ್ಷ ಸಂಘಾವಿ ಕಾಂಗ್ರೆಸ್ ನ ತಮ್ಮ ಪ್ರತಿಸ್ಪರ್ಧಿಯಿಂದ 30 ಸಾವಿರ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.
ಇತ್ತೀಚಿನ ವರದಿಯ ಪ್ರಕಾರ ಗುಜರಾತ್ ನಲ್ಲಿ ಬಿಜೆಪಿ 104 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ 74 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಉತ್ತರ ಗುಜರಾತ್ ನ 53 ವಿಧಾನಸಭಾ ಕ್ಷೇತ್ರಗಳ ಪೈಕಿ 28 ರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, 25 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಸೆಂಟ್ರಲ್ ಗುಜರಾತ್ ನಲ್ಲಿ 22 ಕ್ಷೇತ್ರಗಳಲ್ಲಿ ಬಿಜೆಪಿ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.