ಅಹಮಬಾದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಹಾರ್ದಿಕ್ ಪಟೇಲ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಇವಿಎಂ ನ ಸಹಾಯದಿಂದ ಗೆಲುವು ಸಾಧಿಸಿದೆ ಎಂದು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಹಾರ್ದಿಕ್ ಪಟೇಲ್ ಬಿಜೆಪಿ ಸೂರತ್ ರಾಜ್ ಕೋಟ್ ಅಹಮದಾಬಾದ್ ನಲ್ಲಿ ದುರ್ಬಳಕೆ ಮಾಡಿ ಬಿಜೆಪಿ ಗೆದ್ದಿದೆ ಎಂದು ಆರೋಪಿಸಿರುವ ಹಾರ್ದಿಕ್ ಪಟೇಲ್ ಮರು ಮತ ಎಣಿಕೆ ನಡೆಸುವಂತೆ ಆಗ್ರಹಿಸಿದ್ದಾರೆ.
ಇವಿಎಂ ಹ್ಯಾಕ್, ಬಿಜೆಪಿ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹಾರ್ದಿಕ್ ಪಟೇಲ್ ತಿಳಿಸಿದ್ದಾರೆ.