ಅದೇ ರೀತಿ ಕಳೆದ ರಾತ್ರಿ ಶೋಪಿಯಾನ್ ನಲ್ಲಿ ಅವಿತು ದಾಳಿಗೆ ಸಂಚು ರೂಪಿಸುತ್ತಿದ್ದ ಇಬ್ಬರು ಉಗ್ರಗಾಮಿಗಳನ್ನು ಭಾರತೀಯ ಸೇನೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಹತ್ಯೆಗೈದಿದ್ದಾರೆ. ಶೋಪಿಯಾನ್ ಜಿಲ್ಲೆಯ ಕೆಲ್ಲರ್ ತೆಹ್ಸೀಲ್ ನ ಬತ್ಮುರ್ರನ್ ಗ್ರಾಮದಲ್ಲಿ ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಭಾರತೀಯ ಸೇನೆಯ 44 ರಾಷ್ಟ್ರೀಯ ರೈಫಲ್ಸ್ ನ ಯೋಧರು, ಜಮ್ಮು ಮತ್ತು ಕಾಶ್ಮೀರ ವಿಶೇಷ ಕಾರ್ಯಾಚರಣೆ ಪಡೆ ಮತ್ತು ಕೇಂದ್ರೀಯ ಮೀಸಲು ಪಡೆ (ಸಿಆರ್ ಪಿಎಫ್)ಯ 14ನೇ ಬೆಟಾಲಿಯನ್ ಪಡೆಯ ಯೋಧರು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಕೊಂದು ಹಾಕಿದ್ದಾರೆ.