ಲಕ್ಷದ್ವೀಪ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಒಖಿ ಚಂಡಮಾರುತದಿಂದ ಹಾನಿಗೊಳಗಾದ ಲಕ್ಷದ್ವೀಪದ ಕವರಟ್ಟಿಗೆ ಭೇಟಿ ನೀಡಿ, ಸಂತ್ರಸ್ತ ಕುಟುಂಬಗಳಿಗೆ ವಿಶ್ವಾಸ ತುಂಬಿದರು.
ನಿನ್ನೆ ರಾತ್ರಿ ಮಂಗಳೂರಿನಲ್ಲಿ ತಂಗಿದ್ದ ಪ್ರಧಾನಿ ಮೋದಿ, ಇಂದು ಬೆಳಗ್ಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದರು. ಲಕ್ಷದ್ವೀಪದಲ್ಲಿ ಪ್ರಧಾನಿ ಅವರನ್ನು ಶಾಲೆ, ಕಾಲೇಜು ವಿದ್ಯಾರ್ಥಿಗಳು ಸ್ವಾಗತಿಸಿದರು. ಸ್ವಾಗತ ಕೋರಿದ ಮಕ್ಕಳ ಜತೆ ಮೋದಿ ಕೆಲ ಕಾಲ ಮಾತನಾಡಿದರು.
ಬಳಿಕ, ಪ್ರಧಾನಿ ಚಂಡಮಾರುತದಿಂದ ಆಗಿರುವ ಹಾನಿಯ ಕುರಿತು ಉನ್ನತಾಧಿಕಾರಿಗಳ ಜತೆ ಸಭೆ ನಡೆಸಿ, ಮಾಹಿತಿ ಪಡೆದರು. ನಂತರ ಚಂಡಮಾರುತದಿಂದ ನಿರಾಶ್ರಿತರಾದ ಕುಟುಂಬಗಳ ಸದಸ್ಯರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದರು.
ಲಕ್ಷದ್ವೀಪದಿಂದ ಈಗ ಕೇರಳಕ್ಕೆ ಪ್ರಧಾನಿ ಮೋದಿ ತೆರಳಿದ್ದು, ಅವರನ್ನು ತಿರುವನಂತಪುರದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ವಾಗತಿದರು.