ಕುಲಭೂಷಣ್ ಜಾಧವ್ ತಾಯಿ, ಪತ್ನಿಗೆ ವೀಸಾ ನೀಡಿದ ಪಾಕಿಸ್ತಾನ

ಅಕ್ರಮ ಬೇಹುಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದಿಂದ ಬಂಧನಕ್ಕೊಳಗಾಗಿರುವ ಭಾರತೀಯ ಕುಲಭೂಷಣ್ ಜಾಧವ್ ಭೇಟಿಗೆ...
ಕುಲಭೂಷಣ್ ಜಾಧವ್
ಕುಲಭೂಷಣ್ ಜಾಧವ್
ನವದೆಹಲಿ: ಅಕ್ರಮ ಬೇಹುಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದಿಂದ ಬಂಧನಕ್ಕೊಳಗಾಗಿರುವ ಭಾರತೀಯ ಕುಲಭೂಷಣ್ ಜಾಧವ್ ಭೇಟಿಗೆ ಅವರ ತಾಯಿ ಮತ್ತು ಪತ್ನಿಗೆ ಪಾಕಿಸ್ತಾನ ಸರ್ಕಾರ ವೀಸಾ ನೀಡಿದೆ. 
ಕುಲಭೂಷಣ್ ಜಾದವ್ ಅವರ ತಾಯಿ ಆವಂತಿಕಾ ಹಾಗೂ ಪತ್ನಿ ಇಸ್ಲಾಮಾಬಾದ್ ಗೆ ತೆರಳಲು ನವದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿ ವೀಸಾ ನೀಡಿದ್ದು ಈ ಹಿನ್ನೆಲೆಯಲ್ಲಿ ಡಿಸೆಂಬರ್ 25ರಂದು ಕುಲಭೂಷಣ್ ಜಾಧವ್ ತಾಯಿ ಮತ್ತು ಪತ್ನಿಯನ್ನು ಭೇಟಿಯಾಗುವ ಸಾಧ್ಯತೆ ಇದೆ.
ನವೆಂಬರ್ 10ರಂದು ಕುಲಭೂಷಣ್ ಜಾಧವ್ ಭೇಟಿಗೆ ಅವರ ತಾಯಿ ಮತ್ತು ಪತ್ನಿಗೆ ಅವಕಾಶ ಮಾಡಿಕೊಡುವುದಾಗಿ ಪಾಕಿಸ್ತಾನ ಸರ್ಕಾರ ಹೇಳಿತ್ತು. ಈ ಹಿಂದೆ ಕುಲಭೂಷಣ್ ಜಾಧವ್ ಕುರಿತಂತೆ ಭಾರತ ಸರ್ಕಾರ 20 ಬಾರಿ ಮನವಿ ಮಾಡಿದ್ದರು ಈ ಮನವಿಯನ್ನು ಪಾಕಿಸ್ತಾನ ಸರ್ಕಾರ ತಿರಸ್ಕರಿಸಿತ್ತು. 
47 ವರ್ಷದ ಕುಲಭೂಷಣ್ ಜಾದವ್ ಪಾಕಿಸ್ತಾನದಲ್ಲಿ ಬೇಹುಗಾರಿಕೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಕಳೆದ ಏಪ್ರಿಲ್ ನಲ್ಲಿ ಪಾಕಿಸ್ತಾನ ಮಿಲಿಟರಿ ನ್ಯಾಯಾಲಯ ಗಲ್ಲು ಶಿಕ್ಷೆ ಕಾಯಂಗೊಳಿಸಿತ್ತು. ಇದನ್ನು ವಿರೋಧಿಸಿ ಭಾರತ  ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com