2ಜಿ ಹಗರಣ: ಸತ್ಯಕ್ಕೆ ಎಂದಿಗೂ ಜಯವಿದೆ- ಕನ್ನಿಮೋಳಿ

2ಜಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪನ್ನು ಸ್ವಾಗತಿಸಿರುವ ಡಿಎಂಕೆ ನಾಯಕ ಕನ್ನಿಮೋಳಿಯವರು, ಸತ್ಯಕ್ಕೆ ಎಂದಿಗೂ ಜಯವಿದೆ ಎಂದು ಗುರುವಾರ ಹೇಳಿದ್ದಾರೆ...
ಡಿಎಂಕೆ ನಾಯಕಿ ಕನ್ನಿಮೋಳಿ
ಡಿಎಂಕೆ ನಾಯಕಿ ಕನ್ನಿಮೋಳಿ
ನವದೆಹಲಿ: 2ಜಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪನ್ನು ಸ್ವಾಗತಿಸಿರುವ ಡಿಎಂಕೆ ನಾಯಕಿ ಕನ್ನಿಮೋಳಿಯವರು, ಸತ್ಯಕ್ಕೆ ಎಂದಿಗೂ ಜಯವಿದೆ ಎಂದು ಗುರುವಾರ ಹೇಳಿದ್ದಾರೆ. 
ನ್ಯಾಯಾಲಯದ ತೀರ್ಪು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ನ್ಯಾಯಾಲಯ ಆದೇಶದಿಂದ ನಮಗೆ ಸಂತೋಷವಾಗಿದೆ. ಸತ್ಯಕ್ಕೆ ಎಂದಿಗೂ ಜಯವಿದೆ. ಡಿಎಂಕೆಗೆ ಹಾಗೂ ನನ್ನ ಕುಟುಂಬಕ್ಕೆ ಇದೊಂದು ದೊಡ್ಡ ದಿನ. ನನ್ನ ವಿರುದ್ಧ ಹಾಗೂ ಎಲ್ಲಾ ಸಮಸ್ಯೆಗಳಿಗೆ ನ್ಯಾಯಾಲಯದ ಆದೇಶ ಉತ್ತರವಾಗಿದೆ ಎಂದು ಹೇಳಿದ್ದಾರೆ. 
2ಜಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಹಗರಣದ ಪ್ರಮುಖ ಆರೋಪಿಗಳಾಗಿದ್ದ ಕರುಣಾನಿಧಿ ಪುತ್ರಿ ಕನ್ನಿಮೋಳಿ, ಸಂಬಂಧಿ ಎ ರಾಜಾ ಅವರನ್ನೂ ಸೇರಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳನ್ನು ನಿರಪರಾಧಿಗಳೆಂದು ಖುಲಾಸೆಗೊಳಿಸಿದೆ. ಅಲ್ಲದೆ, ತನಿಖಾ ಸಂಸ್ಥೆ ಮೇಲ್ಮನೆ ಕೋರ್ಟ್ ಗೆ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದರೆ, ಎಲ್ಲ ಆರೋಪಿಗಳು 5 ಲಕ್ಷ ಭದ್ರತಾ ಠೇವಣಿ ಇಡುವಂತೆಯೂ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com