2ಜಿ ಹಗರಣದ ಆರೋಪಿಗಳನ್ನು ಖುಲಾಸೆಗೊಳಿಸಲು ಬಿಜೆಪಿ ಸಂಚು: ಆಮ್ ಆದ್ಮಿ ಪಕ್ಷ

2 ಜಿ ಹಗರಣದ ತೀರ್ಪಿನ ಬಗ್ಗೆ ಆಮ್ ಆದ್ಮಿ ಪಕ್ಷ ಪ್ರತಿಕ್ರಿಯೆ ನೀಡಿದ್ದು, ಹಗರಣದ ಆರೋಪಿಗಳನ್ನು ಖುಲಾಸೆಗೊಳಿಸಲು ಬಿಜೆಪಿ ಷಡ್ಯಂತ್ರ ರೂಪಿಸಿದೆ ಎಂದು ಆರೋಪಿಸಿದೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on
ನವದೆಹಲಿ: 2 ಜಿ ಹಗರಣದ ತೀರ್ಪಿನ ಬಗ್ಗೆ ಆಮ್ ಆದ್ಮಿ ಪಕ್ಷ ಪ್ರತಿಕ್ರಿಯೆ ನೀಡಿದ್ದು, ಹಗರಣದ ಆರೋಪಿಗಳನ್ನು ಖುಲಾಸೆಗೊಳಿಸಲು ಬಿಜೆಪಿ ಷಡ್ಯಂತ್ರ ರೂಪಿಸಿದೆ ಎಂದು ಆರೋಪಿಸಿದೆ. 
ತೀರ್ಪಿನ ಬಗ್ಗೆ ಟ್ವೀಟ್ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಬಿಐ ಹಗರಣದ ಆರೋಪಿಗಳ ಅಪರಾಧವನ್ನು ಸಾಬೀತುಪಡಿಸುವಲ್ಲಿ ವಿಫಲಗೊಂಡಿದೆ. ಸಿಬಿಐ ಏಕೆ ವಿಫಲಗೊಂಡಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಈಗ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ. 
2ಜಿ ಹಗರಣ ದೇಶದ ಅತಿ ದೊಡ್ಡ ಹಗರಣ, ಯುಪಿಎ ಸರ್ಕಾರವನ್ನು ಜನರು ತಿರಸ್ಕರಿಸಿದ್ದೂ ಇದೇ ಕಾರಣಕ್ಕಾಗಿ. ಉದ್ದೇಶಪೂರ್ವಕವಾಗಿಯೇ ಸಿಬಿಐ ಈ ಪ್ರಕರಣದಲ್ಲಿ ದುರ್ಬಲ ವಾದ ಮಂಡಿಸಿದೆಯೇ, ಜನರಿಗೆ ಉತ್ತರ ಬೇಕಿದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com