2ಜಿ ತೀರ್ಪು ಅನಿರೀಕ್ಷಿತ, ಸರ್ಕಾರದ ಹಂಚಿಕೆ 'ದೋಷಯುಕ್ತ': ಟೆಲಿಕಾಂ ಸಚಿವ

2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣದ ಎಲ್ಲಾ ಆರೋಪಿಗಳನ್ನು ಸಿಬಿಐ ವಿಶೇಷ ಕೋರ್ಟ್ ಖುಲಾಸೆಗೊಳಿಸಿ ತೀರ್ಪು ನೀಡಿರುವುದು ಅನಿರೀಕ್ಷಿತ
ಮನೋಜ್ ಸಿನ್ಹಾ
ಮನೋಜ್ ಸಿನ್ಹಾ
ನವದೆಹಲಿ: 2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣದ ಎಲ್ಲಾ ಆರೋಪಿಗಳನ್ನು ಸಿಬಿಐ ವಿಶೇಷ ಕೋರ್ಟ್ ಖುಲಾಸೆಗೊಳಿಸಿ ತೀರ್ಪು ನೀಡಿರುವುದು ಅನಿರೀಕ್ಷಿತ. ಆದರೆ ಯುಪಿಎ ಸರ್ಕಾರದ 2ಜಿ ಸ್ಪೆಕ್ಟ್ರಂ ಹಂಚಿಕೆಯಲ್ಲಿ ದೋಷ ಇದೆ ಮತ್ತು ಅದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಗುರುವಾರ ಕೇಂದ್ರ ಸರ್ಕಾರ ಪ್ರತಿಪಾದಿಸಿದೆ.
ಸಿಬಿಐ ವಿಶೇಷ ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಟೆಲಿಕಾಂ ಸಟಿವ ಮನೋಜ್ ಸಿನ್ಹಾ ಅವರು, 2012ರಲ್ಲಿ ರದ್ದುಗೊಂಡ ಎಂಟು ಆಪರೇಟರ್ಗಳಿಗೆ ಸೇರಿದ 122 ಟೆಲಿಕಾಂ ಪರವಾನಗಿಗಳ ಆಧಾರದ ಮೇಲೆ ಸಿಬಿಐ ತನಿಖೆ ನಡೆಸಿರುವುದರಿಂದ ಆರೋಪಿಗಳು ಖುಲಾಸೆಗೊಂಡಿದ್ದಾರೆ ಎಂದಿದ್ದಾರೆ.
2001ರಲ್ಲಿ ಯುಪಿಎ ಸರ್ಕಾರ ವಿರಳ ನೈಸರ್ಗಿಕ ಸಂಪನ್ಮೂಲಗಳನ್ನು ಹರಾಜು ಪ್ರಕ್ರಿಯೆಯಲ್ಲೇ ತಪ್ಪು ಮಾಡಿದೆ. ಮೊದಲು ಬಂದವರಿಗೆ ಮೊದಲ ಆಧ್ಯತೆ ಎಂಬ ಆಧಾರದ ಮೇಲೆ ಸ್ಪೆಕ್ಟ್ರಂ ಹಂಚಿಕೆ ಮಾಡಿರ ನೀತಿಯೇ ಭ್ರಷ್ಟಾಚಾರದಿಂದ ಕೂಡಿದೆ ಎಂದು ಸಿನ್ಹಾ ಆರೋಪಿಸಿದ್ದಾರೆ.
2ಜಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಹಗರಣದ ಪ್ರಮುಖ ಆರೋಪಿಗಳಾಗಿದ್ದ ಕರುಣಾನಿಧಿ ಪುತ್ರಿ ಕನ್ನಿಮೋಳಿ, ಸಂಬಂಧಿ ಎ ರಾಜಾ ಅವರನ್ನೂ ಸೇರಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳನ್ನು ನಿರಪರಾಧಿಗಳೆಂದು ಖುಲಾಸೆಗೊಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com