ಜಮ್ಮು-ಕಾಶ್ಮೀರ: ನೌಶೆರಾ ಸೆಕ್ಟರ್ ಬಳಿ ಕದನ ವಿರಾಮ ಉಲ್ಲಂಘಿಸಿದ ಪಾಕ್
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ತನ್ನ ಉದ್ಧಟತನವನ್ನು ಪ್ರದರ್ಶಿಸಿದ್ದು,ನೌಶೆರಾ ಸೆಕ್ಟರ್ ಬಳಿ ಕದನ ಉಲ್ಲಂಘಿಸಿರುವ ಪಾಕಿಸ್ತಾನ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ...
ನೌಶೆರಾ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ತನ್ನ ಉದ್ಧಟತನವನ್ನು ಪ್ರದರ್ಶಿಸಿದ್ದು,ನೌಶೆರಾ ಸೆಕ್ಟರ್ ಬಳಿ ಕದನ ಉಲ್ಲಂಘಿಸಿರುವ ಪಾಕಿಸ್ತಾನ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ನಿನ್ನೆ ಸಂಜೆ 5.50ರ ಸುಮಾರಿಗೆ ಪಾಕಿಸ್ತಾನ ಸೇನೆ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪಾಕಿಸ್ತಾನ ಸೇನೆಯ ಉದ್ಧಟತನಕ್ಕೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದೆ ಎಂದು ತಿಳಿಸಿದ್ದಾರೆ.
6.30ರ ವರೆಗೂ ಭಾರತೀಯ ಸೇನೆ ಹಾಗೂ ಪಾಕಿಸ್ತಾನ ನಡುವೆ ಗುಂಡಿನ ಚಕಮಕಿ ನಡೆದಿತ್ತು ಎಂದು ತಿಳಿದುಬಂದಿದೆ.
ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಹಜಿನ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ವರದಿಗಳು ತಿಳಿಸಿವೆ.