ಮನಮೋಹನ್ ಸಿಂಗ್ ವಿರುದ್ಧ ಪ್ರಧಾನಿ ಹೇಳಿಕೆ: ರಾಜ್ಯಸಭೆಯಲ್ಲಿ ಕಾಂಗ್ರೆಸ್, ಬಿಜೆಪಿಯಿಂದ ನಿಲುವಳಿ ಸೂಚನೆ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಕ್ರಮಣಕಾರಿ ಟೀಕೆ ಮಾಡಿದ್ದಾರೆ ಎಂದು...
ಸಂಸತ್ತು
ಸಂಸತ್ತು
ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಕ್ರಮಣಕಾರಿ ಟೀಕೆ ಮಾಡಿದ್ದಾರೆ ಎಂದು ರಾಜ್ಯಸಭೆಯಲ್ಲಿ ಆಪಾದಿಸುತ್ತಿರುವ ಕಾಂಗ್ರೆಸ್ ಇಂದು ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ನೊಟೀಸ್ ನೀಡಿದೆ.
ನಿಯಮ 267ರಡಿಯಲ್ಲಿ ಕಾಂಗ್ರೆಸ್ ಇಂದು ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಪತ್ರವನ್ನು ನೀಡಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಈ ಮಧ್ಯೆ, ಇದೇ ರೀತಿಯ ನೊಟೀಸನ್ನು ಬಿಜೆಪಿ ಸಂಸದ ವಿನಯ್ ಸಹಸ್ರಬುದ್ದೆ ಅವರು ರಾಜ್ಯಸಭಾಧ್ಯಕ್ಷರಿಗೆ ನಿಯಮ 267ರಡಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ನೀಡಿದ್ದಾರೆ.
ಇತ್ತೀಚೆಗೆ ಗುಜರಾತ್ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿರುದ್ಧ ನರೇಂದ್ರ ಮೋದಿಯವರು ನಿಂದನಕಾರಿ ಹೇಳಿಕೆ ನೀಡಿದ್ದು ಇದಕ್ಕೆ ಪ್ರಧಾನಿಯವರು ಕ್ಷಮೆ ಕೇಳಬೇಕೆಂದು ಕಲಾಪ ಆರಂಭವಾದಂದಿನಿಂದ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಲೇ ಬಂದಿದೆ. 2 ಜಿ ಟೆಲಿಕಾಂ ಸ್ಪೆಕ್ಟ್ರಮ್ ಹಗರಣದ ಆರೋಪಿಗಳ ಖುಲಾಸೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಬಗ್ಗೆ ತೀವ್ರ ಗದ್ದಲ, ಕೋಲಾಹಲವೆದ್ದ ಕಾರಣ ನಿನ್ನೆ ರಾಜ್ಯಸಭೆ ಕಲಾಪವನ್ನು ಮುಂದೂಡಲಾಗಿತ್ತು.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಪಾಕಿಸ್ತಾನಕ್ಕೆ ನೆರವು ನೀಡುತ್ತಿದ್ದಾರೆ ಎಂದು ಪ್ರಧಾನಿ ಆರೋಪಿಸಿದ್ದರು.
2ಜಿ ಸ್ಪೆಕ್ಟ್ರಮ್ ಹಗರಣದ ಆರೋಪಿಗಳ ಖುಲಾಸೆ ವಿರುದ್ಧ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿ ಕಲಾಪಕ್ಕೆ ಅಡ್ಡಿಯನ್ನುಂಟುಮಾಡಿದರು ಮತ್ತು ಪ್ರಧಾನಿ ಮೋದಿಯಿಂದ ಈ ಕುರಿತು ವಿವರಣೆ ಕೋರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com