ವಿಜಯ್ ರೂಪಾನಿ-ನಿತಿನ್ ಪಟೇಲ್
ದೇಶ
ಗುಜರಾತ್: ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ, ಉಪ ಮುಖ್ಯಮಂತ್ರಿಯಾಗಿ ನಿತಿನ್ ಪಟೇಲ್ ಮುಂದುವರಿಕೆ
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದು ಇದೀಗ ಗುಜರಾತ್ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಅಧಿಕಾರ ಸ್ವೀಕರಿಸಲಿದ್ದಾರೆ...
ಗಾಂಧಿನಗರ(ಗುಜರಾತ್): ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದು ಇದೀಗ ಗುಜರಾತ್ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಅಧಿಕಾರ ಸ್ವೀಕರಿಸಲಿದ್ದಾರೆ.
ಗಾಂಧಿನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಜಯ್ ರೂಪಾನಿ ಅವರು ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು ಇದೇ ಡಿಸೆಂಬರ್ 25ರಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟಹಬ್ಬದ ದಿನ ರೂಪಾನಿ ಮುಖ್ಯಮಂತ್ರಿಯಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ನಿತಿನ್ ಬಾಯ್ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಗುಜರಾತ್ ನ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಹಾಗೂ ಉಪ ಮುಖ್ಯಮಂತ್ರಿಯಾಗಿ ನಿತಿನ್ ಪಟೇಲ್ ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸುತ್ತಿದ್ದಾರೆ.
ಗುಜರಾತ್ ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 182 ಸ್ಥಾನಗಳ ಪೈಕಿ 99 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಪಡೆದಿತ್ತು. ಸರಳ ಬಹುಮತಕ್ಕೆ 92 ಸ್ಥಾನಗಳು ಬೇಕಿತ್ತು. ಇನ್ನು ಓರ್ವ ಪಕ್ಷೇತರ ಶಾಸಕ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದು ಬಿಜೆಪಿಯ ಸಂಖ್ಯೆ 100ಕ್ಕೇರಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ