ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸುವುದು ಕಷ್ಟವೇನಲ್ಲ : ಚಿದಂಬರಂ

ಸರಣಿ ಟ್ವೀಟ್ ಮಾಡಿರುವ ಚಿದಂಬರಂ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸುವುದು ಕಷ್ಟವೇನಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ
ಚಿದಂಬರಂ
ಚಿದಂಬರಂ
Updated on: 
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ನೀತಿಗಳ ಬಗ್ಗೆ ಮಾಜಿ ಕೇಂದ್ರ ವಿತ್ತ ಸಚಿವ ಪಿ.ಚಿದಂಬರಂ ಮತ್ತೊಮ್ಮೆ ಹರಿ ಹಾಯ್ದಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದು, ಲೋಕಸಭಾ ಚುನಾವಣೆಯೂ ಸೇರಿದಂತೆ ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಈ ಅಂಶ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದ್ದಾರೆ. 
ಸರಣಿ ಟ್ವೀಟ್ ಮಾಡಿರುವ ಚಿದಂಬರಂ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸುವುದು ಕಷ್ಟವೇನಲ್ಲ. ದೆಹಲಿ ಹಾಗೂ ಬಿಹಾರದ ಮಾದರಿಯ ಕಾರ್ಯತಂತ್ರ ಬಿಜೆಪಿಯನ್ನು ಸೋಲಿಸಬಹುದಾಗಿದೆ ಎಂದು ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ. 
ಗುಜರಾತ್ ನಲ್ಲಿ ಬಿಜೆಪಿ ಕೂದಲೆಳೆ ಅಂತರದಿಂದ ಸೋಲಿನಿಂದ ಪಾರಾಗಿದೆ. ಗುಜರಾತ್ ನಲ್ಲಿ ಒಂದು ರೀತಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಗೆದ್ದಿವೆ. ಬಿಜೆಪಿ ಚುನಾವಣಾ ಗೆಲುವು ದಾಖಲಿಸಿದ್ದರೆ, ಕಾಂಗ್ರೆಸ್ ರಾಜಕೀಯ ಗೆಲುವು ದಾಖಲಿಸಿದೆ. ಆದರೆ ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸುವುದು ಕಷ್ಟವೇನಲ್ಲ, ದೆಹಲಿ ಮತ್ತು ಬಿಹಾರ ಮಾದರಿಯ ಕಾರ್ಯತಂತ್ರ ಮಾತ್ರ ಬಿಜೆಪಿಯನ್ನು ಸೋಲಿಸಬಹುದು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com