ಉತ್ತರ ಪ್ರದೇಶ: ನೋಯ್ಡಾ ಹಾಗೂ ಗ್ರೇಟರ್ ನೋಯ್ಡಾದ ಮಾಜಿ ಮುಖ್ಯ ಇಂಜಿನಿಯರ್ ಯಾದವ್ ಸಿಂಗ್ ಅವರಿಗೆ ಸೇರಿದ 5.9 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಮಾಡಿದ್ದ ಪ್ರಕರಣದಲ್ಲಿ ಯಾದವ್ ಸಿಂಗ್ ಅವರಿಗೆ ಸೇರಿದ 5.9 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಜಪ್ತಿ ಮಾಡಲಾಗಿದೆ. ಯಾದವ್ ಸಿಂಗ್ 2016 ರ ಫೆಬ್ರವರಿಯಿಂದ ಜೈಲು ಶಿಕ್ಷೆ ಎದುರಿಸುತ್ತಿದ್ದಾರೆ.
ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದ ಆರೋಪದಡಿ ಬಂಧಿಸಲಾಗಿತ್ತು. ಮಾಜಿ ಮುಖ್ಯ ಇಂಜಿನಿಯರ್ ವಿರುದ್ಧ ಜಾರಿ ನಿರ್ದೇಶನಾಲಯ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಪ್ರಕರಣ ದಾಖಲಿಸಿತ್ತು.