ದೆಹಲಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಿಗೆ ಗಾಯ
ರಾಜಧಾನಿ ದೆಹಲಿಯ ಪ್ರೀತ್ ವಿಹಾರ್'ನಲ್ಲಿರರುವ ಮೆಟ್ರೋ ಆಸ್ಪತ್ರೆ ಹಾಗೂ ಕ್ಯಾನ್ಸರ್ ಇನ್ಟಿಟ್ಯೂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರೋಗಿಗಳು ಗಾಯಗೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ...
ನವದೆಹಲಿ: ರಾಜಧಾನಿ ದೆಹಲಿಯ ಪ್ರೀತ್ ವಿಹಾರ್'ನಲ್ಲಿರರುವ ಮೆಟ್ರೋ ಆಸ್ಪತ್ರೆ ಹಾಗೂ ಕ್ಯಾನ್ಸರ್ ಇನ್ಟಿಟ್ಯೂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರೋಗಿಗಳು ಗಾಯಗೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ.
ಆಸ್ಪತ್ರೆಯ 2ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 92ಕ್ಕೂ ಹೆಚ್ಚು ರೋಗಿಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆಸ್ಪತ್ರೆಗೆ ಬಂದ ಸಂದರ್ಭದಲ್ಲಿ 2ನೇ ಮಹಡಿಯಲ್ಲಿ ಹೊಗೆ ಬರುತ್ತಿರುವುದು ಕಾಣಿಸಿತು. ಕೂಡಲೇ ಸ್ಥಳದಲ್ಲಿದ್ದ ರೋಗಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳನ್ನು ಸ್ಥಳಾಂತರ ಮಾಡಲಾಯಿತು. 43 ರೋಗಿಗಳನ್ನು ನೊಯ್ಡಾದಲ್ಲಿರುವ ಮೆಟ್ರೋ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನು ಕೆಲವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಆಸ್ಪತ್ರೆ 5 ಮಹಡಿಯದ್ದಾಗಿದ್ದು, ಕಟ್ಟಡದಲ್ಲಿದ್ದ ಎಲ್ಲರನ್ನೂ ಖಾಲಿ ಮಾಡಿಸಲಾಗಿತ್ತು. ಆಸ್ಪತ್ರೆಯಲ್ಲಿ 240 ಸಿಬ್ಬಂದಿಗಳಿದ್ದರು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಸ್ಪತ್ರೆಯ ಹವಾನಿಯಂತ್ರಣ (ಎಸಿ)ದಿಂದ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಬೆಂಕಿಯ ಕೆನ್ನಾಲಿಗೆ ಇತರೆ ಮಹಡಿಗೂ ತಗುಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ನಿನ್ನೆ ಸಂಜೆ .3.20ರ ಸುಮಾರಿಗೆ ಬೆಂಕಿ ಕಾಣಿಸಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿಕೊಂಡಿದ್ದ ಪರಿಣಾಮ ಕೆಲವು ಹೊರಗೆ ಬರಲು ಸಾಧ್ಯವಾಗದೆ ಸಿಕ್ಕಿಹಾಕಿಕೊಂಡಿದ್ದರು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ವೇಳೆ ಜನರನ್ನು ರಕ್ಷಣೆ ಮಾಡಿದರು ಎಂದು ತಿಳಿಸಿದ್ದಾರೆ.