ನವದೆಹಲಿ: ಭಾರತೀಯ ಪ್ರಜೆ ಕುಲ್'ಭೂಷಣ್ ಜಾಧವ್ ಹಾಗೂ ಅವರ ಕುಟುಂಬ ಸದಸ್ಯರ ಭೇಟಿ ಖಾಸಗಿಯಾಗಿರಬೇಕಿತ್ತು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಪಾಕಿಸ್ತಾನ ವಿದೇಶಾಂಗ ಸಚಿವಾಲಯ, ಪಾಕಿಸ್ತಾನ ವಿದೇಶಾಂಗ ಕಚೇರಿಯಲ್ಲಿ ಕ್ಯಾಮೆರಾಗಳ ಕಣ್ಗಾವಲಿದ್ದು, ಜಾಧವ್ ಹಾಗೂ ಅವರ ಕುಟುಂಬ ಸದಸ್ಯರ ಭೇಟಿಯನ್ನು ಪಾಕಿಸ್ತಾನ ವಿದೇಶಾಂಗ ಕಚೇರಿಯಲ್ಲೇಕೆ ನಡೆಸಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಜಾಧವ್ ಹಾಗೂ ಅವರ ಕುಟುಂಬ ಸದಸ್ಯರ ಭೇಟಿ ಖಾಸಗಿಯಾಗಿರಬೇಕಿತ್ತು. ಆದರೆ, ವಿದೇಶಾಂಗ ಕಚೇರಿಯಲ್ಲಿ ಭೇಟಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಇದೆಂತಹ ಭೇಟಿ? ಜಾಧವ್ ಪತ್ನಿ ತನ್ನ ಪತಿ ಹೇಗಿದ್ದಾರೆಂಬುದನ್ನು ತಿಳಿಯಲು ಹಾಗೂ ಅವರನ್ನು ನೋಡುವ ಸಲುವಾಗಿ ಪಾಕಿಸ್ತಾನಕ್ಕೆ ಹೋಗಿದ್ದಾರೆ. ಜನರು ನೋಡುತ್ತಿದ್ದಾಗ ಪತಿ ಹಾಗೂ ಪತ್ನಿ ಮಾತನಾಡಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.
ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಜಾಧವ್ ಅವರನ್ನು ಭೇಟಿಯಾಗಲು ಅವರ ಪತ್ನಿ ಹಾಗೂ ತಾಯಿ ಈಗಾಗಲೇ ಪಾಕಿಸ್ತಾನ ತಲುಪಿದ್ದಾರೆ.