ವಿಶ್ವದಾದ್ಯಂತ ಕ್ರಿಸ್'ಮಸ್ ಹಬ್ಬುನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾತ್ರಿಯಿಂದಲೇ ಚರ್ಚ್'ಗಳಿಗೆ ತೆರಳಿ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತಿದೆ. ಕ್ರಿಸ್'ಮಸ್ ಅಂಗವಾಗಿ ಚರ್ಚ್'ಗಳಿಗೆ ದೀಪಾಲಂಕಾಗಳನ್ನು ಮಾಡಲಾಗಿತ್ತು. ರಾತ್ರಿಯಿಂದಲೇ ಚರ್ಚ್'ಗಳಲ್ಲಿ ವಿಶೇಷ ಪ್ರವಚನ ನಡೆಸಲಾಗುತ್ತಿದೆ. ಯೇಸು ಪ್ರಭುವಿಗೆ ನಮನಗಳನ್ನು ಸಲ್ಲಿಸಲಾಗುತ್ತಿದೆ.