ದೆಹಲಿಗೆ ಆಗಮಿಸಿದ ಜಾಧವ್ ಕುಟುಂಬ: ಸುಷ್ಮಾ ಸ್ವರಾಜ್ ಜೊತೆ ಚರ್ಚೆ

ಭಾರತದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲ್'ಭೂಷಣ್ ಜಾಧವ್ ಅವರ ಪತ್ನಿ ಹಾಗೂ ತಾಯಿಯವರು ಮಂಗಳವಾರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್'ರನ್ನು ಭೇಟಿಯಾದ ಜಾಧವ್ ಪತ್ನಿ, ತಾಯಿ
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್'ರನ್ನು ಭೇಟಿಯಾದ ಜಾಧವ್ ಪತ್ನಿ, ತಾಯಿ
ನವದೆಹಲಿ: ಭಾರತದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲ್'ಭೂಷಣ್ ಜಾಧವ್ ಅವರ ಪತ್ನಿ ಹಾಗೂ ತಾಯಿಯವರು ಮಂಗಳವಾರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. 
ಸಾಕಷ್ಟು ವಿವಾದ ಹಾಗೂ ಬೆಳವಣಿಗೆಗಳ ಬಳಿಕ ನಿನ್ನೆಯಷ್ಟೇ ಜಾಧವ್ ಪತ್ನಿ ಹಾಗೂ ತಾಯಿ ನಿನ್ನೆ ಪಾಕಿಸ್ತಾನಕ್ಕ ತೆರಳಿ ಜಾಧವ್'ರನ್ನು ಭೇಟಿ ಮಾಡಿದ್ದರು. 
ಭೇಟಿಯಾದ ಬಳಿಕ ಇಂದು ಬೆಳಿಗ್ಗೆ ನವದೆಹಲಿಗೆ ಆಗಮಿಸಿದ್ದು, ಬಳಿಕ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ನಿವಾಸಕ್ಕೆ ತೆರಳಿ ಸುಷ್ಮಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಭೇಟಿ ವೇಳೆ ವಿದೇಶಾಂಗ ಸಚಿವಾಲಯ ವಕ್ತಾರ ರವೀಶ್ ಕುಮಾರ್ ಹಾಗೂ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರೂ ಕೂಡ ಹಾಜರಿದ್ದರು ಎಂದು ವರದಿಗಳು ತಿಳಿಸಿವೆ. 
ಕುಲಭೂಷಣ್​ ಜಾಧವ್​ಅವರು ಸೋಮವಾರ ಗಾಜಿನ ತಡೆಗೋಡೆ ಮಧ್ಯೆ ತಮ್ಮ ತಾಯಿ ಮತ್ತು ಪತ್ನಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇಸ್ಲಾಮಾಬಾದ್​ನಲ್ಲಿರುವ ಪಾಕ್​ವಿದೇಶಾಂಗ ಸಚಿವಾಲಯದ ಕಚೇರಿಯಲ್ಲಿ ಭೇಟಿಗೆ ವ್ಯವಸ್ಥೆ ಮಾಡಲಾಗಿತ್ತು. ಇದರಂತೆ ನಿನ್ನೆ ಮಧ್ಯಾಹ್ನ 1.35ಕ್ಕೆ ಭೇಟಿಗೆ ಅವಕಾಶ ಮಾಡಿಕೊಡಲಾಯಿತು. ಸುಮಾರು 30 ನಿಮಿಷಗಳ ಕಾಲ ಜಾಧವ್,​ ತಾಯಿ ಮತ್ತು ಪತ್ನಿ ಜೊತೆ ಮಾತುಕತೆ ನಡೆಸಿದ್ದರು.
ತಡೆಗೋಡೆ ಮಧ್ಯೆ ಕುಟುಂಬ ಸದಸ್ಯರೊಂದಿನ ಜಾಧವ್ ಭೇಟಿಯಾದ ಹಿನ್ನಲೆಯಲ್ಲಿ ಪಾಕಿಸ್ತಾನದ ಸಾಕಷ್ಟು ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗತೊಡಗಿದವು. 
ಈ ಹಿನ್ನಲೆಯಲ್ಲಿ ಹೇಳಿಕೆ ನೀಡಿದ ಪಾಕಿಸ್ತಾನ ವಿದೇಶಾಂಗ ಸಚಿವಾಲಯ, ಭದ್ರತಾ ಕಾರಣಗಳಿಂದಾಗಿ ತಡೆಗೋಡೆ ಮಧ್ಯೆಯೇ ಭೇಟಿಗೆ ಅವಕಾಶ ಕಲ್ಪಿಸಲಾಗಿತ್ತು ಎಂದು ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರ ಭದ್ರತಾ ಕಾರಣಗಳಿಂದಾಗಿ ತಡೆಗೋಡೆ ಮಧ್ಯೆ ಭೇಟಿಯನ್ನು ಆಯೋಜಿಸಲಾಗಿತ್ತು. ಈ ಬಗ್ಗೆ ನಾವು ಈ ಹಿಂದೆಯೇ ಜಾಧವ್ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದೆವು. ಜಾಧವ್ ಭೇಟಿಗೆ ಅವಕಾಶ ಮಾಡಿಕೊಡುತ್ತೇವೆ. ಆದರೆ, ಭೇಟಿಯು ತಡೆಗೋಡೆ ಮಧ್ಯೆಯೇ ನಡೆಯಲಿದೆ ಎಂದು ಹೇಳಿದ್ದವು ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com