ಉತ್ತರ ಪ್ರದೇಶ: ಗನ್ ತೋರಿಸಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಇಲ್ಲಿನ ನಗ್ಲಾ ಬಜುರ್ಗ್ ಗ್ರಾಮದ ಮನೆಯೊಂದರಲ್ಲಿ ಇಬ್ಬರು ಯುವಕರು 15 ವರ್ಷದ ಬಾಲಕಿಗೆ ಗನ್ ತೋರಿಸಿ ಸಾಮೂಹಿಕ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಮುಜಾಫರ್ ನಗರ: ಇಲ್ಲಿನ ನಗ್ಲಾ ಬಜುರ್ಗ್ ಗ್ರಾಮದ ಮನೆಯೊಂದರಲ್ಲಿ ಇಬ್ಬರು ಯುವಕರು 15 ವರ್ಷದ ಬಾಲಕಿಗೆ ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಈ ಆಘಾತಕಾರಿ ಘಟನೆ ನಿನ್ನೆ ನಡೆದಿದ್ದು, ಬಾಲಕಿಯ ಮನೆಗೆ ನುಗ್ಗಿದ ಇಬ್ಬರು ಯುವಕರು, ಆಕೆಯನ್ನು ಬಲವಂತವಾಗಿ ಮಹಡಿ ಮೇಲೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಯುವಕರು ಗನ್ ತೋರಿಸಿ ಅತ್ಯಾಚಾರ ಎಸಗಿದ್ದಲ್ಲದೆ, ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com