ವಿಜಯ್ ರುಪಾಣಿ
ದೇಶ
ಗುಜರಾತ್ ಮುಖ್ಯಮಂತ್ರಿಯಾಗಿ ವಿಜಯ್ ರುಪಾನಿ ಪದಗ್ರಹಣ
ಗುಜರಾತ್ ನ ಮುಖ್ಯಮಂತ್ರಿಯಾಗಿ ವಿಜಯ್ ರುಪಾಣಿ ಡಿ.26 ರಂದು ಪದಗ್ರಹಣ ಮಾಡಿದ್ದಾರೆ.
ಗಾಂಧಿನಗರ: ಗುಜರಾತ್ ನ ಮುಖ್ಯಮಂತ್ರಿಯಾಗಿ ವಿಜಯ್ ರುಪಾಣಿ ಡಿ.26 ರಂದು ಪದಗ್ರಹಣ ಮಾಡಿದ್ದಾರೆ.
ರಾಜ್ಯಪಾಲ ಓಂ ಪ್ರಕಾಶ್ ಕೊಹ್ಲಿ ವಿಜಯ್ ರುಪಾಣಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದು, 2 ನೇ ಬಾರಿಗೆ ವಿಜಯ್ ರುಪಾಣಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಜಯ್ ರುಪಾಣಿ ಅವರೊಂದಿಗೆ ಸಂಪುಟ ಸಚಿವರು, ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಕೂಡಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಬಿಹಾರದಲ್ಲಿ ಮೈತ್ರಿ ಸರ್ಕಾರದ ಸಿಎಂ ಆಗಿರುವ ನಿತೀಶ್ ಕುಮಾರ್ ಸೇರಿ ಬಿಜೆಪಿ ಆಡಳಿತ ವಿರುವ 18 ರಾಜ್ಯಗಳ ಮುಖ್ಯಮಂತ್ರಿಗಳು, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ