ಮಹದಾಯಿ ಪ್ರತಿಭಟನೆ: ರಾಜ್ಯಪಾಲರ ಭೇಟಿಗೆ ಅವಕಾಶ ಸಿಗದೇ ಕಾರ್ಯದರ್ಶಿಗೆ ಮನವಿ ಪತ್ರ ನೀಡಿದ ರೈತರು!

ಮಹದಾಯಿ ನದಿ ನೀರು ಹಂಚಿಕೆ ಸಂಬಂಧಿಸಿ ಪ್ರತಿಭಟನಾ ನಿರತ ರೈತರು ಡಿ.27 ರಂದು ರಾಜಭವಕ್ಕೆ ತೆರಳಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.
ಮಹದಾಯಿ ಪ್ರತಿಭಟನೆ
ಮಹದಾಯಿ ಪ್ರತಿಭಟನೆ
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಸಂಬಂಧಿಸಿ ಪ್ರತಿಭಟನಾ ನಿರತ ರೈತರು ಡಿ.27 ರಂದು ರಾಜಭವಕ್ಕೆ ತೆರಳಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. 
ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ರೈತರು, ರಾಜ್ಯಪಾಲರು ರಾಜಭವನದಲ್ಲಿಯೇ ಇದ್ದರೂ ಸಹ ಅಪಾಯಿಂಟ್ ಮೆಂಟ್ ಪಡೆದಿಲ್ಲವೆಂಬ ಕಾರಣಕ್ಕೆ ನಮಗೆ ರಾಜ್ಯಪಾಲರನ್ನು ಭೇಟಿ ಮಾಡಲು ಅವಕಾಶ ನೀಡಿಲ್ಲ, ಬದಲಾಗಿ ನಮ್ಮ ಮನವಿ ಪತ್ರವನ್ನು ರಾಜ್ಯಪಾಲರ ಮುಖ್ಯ ಕಾರ್ಯದರ್ಶಿ ಮನವಿ ಪತ್ರವನ್ನು ಸ್ವೀಕರಿಸಿದ್ದಾರೆ. ರಾಜ್ಯಪಾಲರ ಭೇಟಿಗೆ ಅವಕಾಶ ನೀಡದೇ ಇರುವುದಕ್ಕೆ ನಮ್ಮ ಮನಸ್ಸಿಗೆ ನೋವಾಗಿದೆ ಎಂದು ಪ್ರತಿಭಟನಾ ನಿರತ ರೈತ ವಿರೇಶ್ ಸೋಬರದ ಮಠ ಹೇಳಿದ್ದಾರೆ. 
ರಾಜ್ಯಪಾಲರ ಭೇಟಿಗೆ ಅವಕಾಶ ಅವಕಾಶ ನೀಡದೇ ಇದ್ದುದ್ದನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ, ರಾಜ್ಯಪಾಲರು ನಮ್ಮ ಮನವಿಯನ್ನು ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ರೈತರು ಹೇಳಿದ್ದಾರೆ. 
ರಾಜಭವನದಿಂದ ನಿರ್ಗಮಿಸಿರುವ ರೈತರು ಚುನಾವಣಾ ಆಯೋಗಕ್ಕೆ ತೆರಳಿ ಮನವಿ ಸಲ್ಲಿಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com