ಸಾಧ್ವಿ ಪ್ರಜ್ಞಾ ಸಿಂಗ್, ಪುರೋಹಿತ್ ವಿರುದ್ಧ ಆರೋಪ ಕೈಬಿಟ್ಟ ಎನ್‌ಐಎ
ದೇಶ
ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣ: ಸಾಧ್ವಿ ಪ್ರಜ್ಞಾ ಸಿಂಗ್, ಪುರೋಹಿತ್ ವಿರುದ್ಧ ಆರೋಪ ಕೈಬಿಟ್ಟ ಎನ್‌ಐಎ
2008ರ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಾದ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್, ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ........
ಮುಂಬೈ: 2008ರ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಾದ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್, ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರುಗಳ ವಿರುದ್ಧದ ದೋಷಾರೋಪವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕೈಬಿಟ್ಟಿದೆ.
ಸಾಧ್ವಿ ಪ್ರಜ್ಞಾ ಸಿಂಗ್, ಲೆ.ಸಾದ್ ಪುರೋಹಿತ್ ಮತ್ತು ಇತರೆ ಇಬ್ಬರ ವಿರುದ್ಧ 1999ರ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಅನ್ವಯ ಮಾದಲಾಗಿದ್ದ ಆರೋಪಗಳನ್ನು ಕೈಬಿಟ್ಟಿರುವ ಎನ್‌ಐಎ ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸೆಕ್ಷನ್‌ಗಳ ಅಡಿಯಲ್ಲಿ ವಿಚಾರಣೆ ಮುಂದುವರಿಸುವುದಾಗಿ ಹೇಳಿದೆ.
ಇನ್ನು ಮುಂಬಯಿ ಸೆಶನ್ಸ್ ಕೋರ್ಟ್ ಪ್ರಕರಣದ ಇತರೆ ಮೂವರು ಆರೋಪಿಗಳನ್ನು ಎಲ್ಲ ಆಪಾದನೆಗಳಿಂದ ಮುಕ್ತಗೊಳಿಸಿದ್ದು ಶಿವನಾರಾಯಣ ಕಾಲಸಂಗ್ರ, ಶ್ಯಾಮ ಸಾಹು ಮತ್ತು ಪ್ರವೀಣ್ ತಕ್ಕಾಲ್ಕಿ ಅವರುಗಳು ತಮ್ಮ ಮೇಲಿನ ಎಲ್ಲಾ ಆರೋಪಗಳಿಂದ ಮುಕ್ತರಾಗಿದ್ದಾರೆ.
2008ರ ಸೆ.29ರಂದು ಮಹಾರಾಷ್ಟ್ರದ ಮಾಲೇಗಾಂವ್ ಪ್ರದೇಶದಲ್ಲಿ ಎರಡು ಕಡೆ ಬಾಂಬ್ ಸ್ಪೋಟ ಸಂಭವಿಸಿದ್ದು 7 ಮಂದಿ ಮೃತಪಟ್ಟು,100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪ್ರಮುಖ ಆರೋಪಿ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರನ್ನು ಮುಂಬೈನಲ್ಲಿ ಬಂಧಿಸಿದ್ದು ಘಟನೆ ನಡೆದ 9 ವರ್ಷಗಳ ನಂತರ 2017ರ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಇದಕ್ಕೂ ಮುನ್ನ ಇನ್ನೋರ್ವ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ 2017ರ ಏಪ್ರಿಲ್ ನಲ್ಲಿ ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನು ಮಂಜೂರಾಗಿತ್ತು.

