ಜಾತ್ಯಾತೀತತೆ ಎಂಬ ಪದವನ್ನು ತೆಗೆದುಹಾಕಲು ಸಂವಿಧಾನಕ್ಕೆ ತಿದ್ದುಪಡಿ ತರುತ್ತೇವೆ ಎಂದು ಅನಂತ್ ಕುಮಾರ್ ಹೆಗ್ಡೆ ಹೇಳಿದ್ದರು. ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು ಕೋಲಾಹಲಕ್ಕೆ ಕಾರಣವಾಯಿತು. ಕಾಂಗ್ರೆಸ್ ಸದಸ್ಯರ ಆಕ್ಷೇಪಕ್ಕೆ ಪ್ರತಿಕ್ರಿಯೆ ನೀಡಿರುವ ಸಂಶದೀಯ ವ್ಯವಹಾರಗಳ ರಾಜ್ಯ ಸಚಿವ ವಿಜಯ್ ಗೋಯಲ್, ನಾವು ದೇಶದ ಸಂವಿಧಾನಕ್ಕೆ ಬದ್ಧರಾಗಿದ್ದೇವೆ, ಸಚಿವರ ಹೇಳಿಕೆಯನ್ನು ಒಪ್ಪುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.