ರೈಲು ಪ್ರಯಾಣ ದರ ಏರಿಕೆ ಮಾಡುವ ಯಾವುದೇ ಪ್ರಸ್ತಾವ ಇಲ್ಲ: ರೈಲ್ವೆ ಸಚಿವ

ಭಾರತೀಯ ರೈಲ್ವೆ ರೈಲು ಪ್ರಯಾಣ ದರ ಹೆಚ್ಚಳ ಮಾಡುವ ಯಾವುದೇ ಪ್ರಸ್ತಾವ ಇಲ್ಲ ಎಂದು...
ಸಾಂದರ್ಭೀಕ ಚಿತ್ರ
ಸಾಂದರ್ಭೀಕ ಚಿತ್ರ
ನವದೆಹಲಿ: ಭಾರತೀಯ ರೈಲ್ವೆ ರೈಲು ಪ್ರಯಾಣ ದರ ಹೆಚ್ಚಳ ಮಾಡುವ ಯಾವುದೇ ಪ್ರಸ್ತಾವ ಇಲ್ಲ ಎಂದು ಬುಧವಾರ ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ.
ಪ್ರಯಾಣ ದರ ಏರಿಕೆ ಕುರಿತು ಇಂದು ಲೋಕಸಭೆಗೆ ಲಿಖಿತ ಉತ್ತರ ನೀಡಿದ ರೈಲ್ವೆ ಖಾತೆ ರಾಜ್ಯ ಸಚಿವ ರಾಜೆನ್‌ ಗೊಹೆನ್‌ ಅವರು, ದರ ಏರಿಕೆಯ ಕುರಿತಾದ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದಿದ್ದಾರೆ.
ಪ್ರಸಕ್ತ ಸಾಲಿನ ಏಪ್ರಿಲ್‌ ನಿಂದ ನವೆಂಬರ್‌ ತಿಂಗಳವರೆಗೆ ರೈಲ್ವೆ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ. ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ ಶೇ. 0.99ರಷ್ಟು ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಹಬ್ಬಗಳು ಹಾಗೂ ವಿಶೇಷ ಸಂದರ್ಭಗಳಲ್ಲಿ ಹೆಚ್ಚು ರೈಲು ಸಂಚಾರಕ್ಕೆ ಆದ್ಯತೆ ನೀಡಲಾಗಿದೆ. ವಿಶೇಷ ರೈಲುಗಳ ಸಂಚಾರ ಆರಂಭಿಸಿದರೆ ದರಗಳನ್ನು ಹೆಚ್ಚಳ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಹೆಚ್ಚು ಬೇಡಿಕೆ ಇದ್ದ ಸಂದರ್ಭದಲ್ಲಿ ಸುವಿಧಾ ರೈಲುಗಳ ಸಂಚಾರ ಆರಂಭಿಸಲಾಗಿದೆ. ತತ್ಕಾಲ್‌ ಮಾದರಿಯಲ್ಲಿ ದರಗಳನ್ನು ನಿಗದಿಪಡಿಸಲಾಗಿದೆ ಉಳಿದಂತೆ ಯಾವುದೇ ಪ್ರಯಾಣ ದರ ಹೆಚ್ಚಳ ಮಾಡಿಲ್ಲ, ಸದ್ಯಕ್ಕೆ ಏರಿಕೆ ಮಾಡುವ ಪ್ರಸ್ತಾವ ಕೂಡ ಇಲ್ಲ ಎಂದು ರಾಜೆನ್‌ ಗೊಹೆನ್‌ ಸ್ಪಷ್ಟಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com