ಹೆಗ್ಡೆ ಸಂವಿಧಾನ ಬದಲಾವಣೆ ಹೇಳಿಕೆ: ರಾಜ್ಯಸಭೆಯಲ್ಲಿ ಗದ್ದಲ, ಕಲಾಪ ಮುಂದೂಡಿಕೆ

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆ ಕರ್ನಾಟಕದಲ್ಲಿ ಮಾತ್ರವಲ್ಲ ಬದಲಿಗೆ ದೆಹಲಿಯಲ್ಲೂ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು, ರಾಜ್ಯಸಭೆಯಲ್ಲಿ ಇದೇ ವಿಚಾರ ಕೋಲಾಹಲಕ್ಕೆ ಕಾರಣವಾಗಿದೆ.
ರಾಜ್ಯಸಭೆ ಕಲಾಪ ಮತ್ತು ಅನಂತ್ ಕುಮಾರ್ ಹೆಗ್ಡೆ
ರಾಜ್ಯಸಭೆ ಕಲಾಪ ಮತ್ತು ಅನಂತ್ ಕುಮಾರ್ ಹೆಗ್ಡೆ
ನವದೆಹಲಿ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆ ಕರ್ನಾಟಕದಲ್ಲಿ ಮಾತ್ರವಲ್ಲ ಬದಲಿಗೆ ದೆಹಲಿಯಲ್ಲೂ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು, ರಾಜ್ಯಸಭೆಯಲ್ಲಿ ಇದೇ ವಿಚಾರ ಕೋಲಾಹಲಕ್ಕೆ ಕಾರಣವಾಗಿದೆ.
ಇಂದು ರಾಜ್ಯಸಭೆಯಲ್ಲಿ ಅನಂತ್ ಕುಮಾರ್ ಹೆಗ್ಡೆ ಅವರ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷದ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು  ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾಡಿದ್ದ ವಾಗ್ದಾಳಿ ಸಂಬಂಧ ಗದ್ದಲ ನಡೆಸಿದ್ದ ಪ್ರತಿಪಕ್ಷಗಳು ನಾಲ್ಕು ದಿನಗಳ ಬಳಿಕ ಇದೀಗ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರ ಹೇಳಿಕೆಯನ್ನು ಮುಂದಿಟ್ಟುಕೊಂಡು  ರಾಜ್ಯಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿವೆ.
ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್ ಅವರು ಇಂದು ರಾಜ್ಯಸಭೆಯಲ್ಲಿ ಈ ವಿಷಯ ಪ್ರಸ್ತಾಪ ಮಾಡಿದರು. ಈ ವೇಳೆ ಮಾತನಾಡಿದ ಅವರು ಭಾರತೀಯ ಸಂವಿಧಾನದ ಬಗ್ಗೆ ಬಿಜೆಪಿ ಮುಖಂಡರಿಗೆ ಜ್ಞಾನವಿಲ್ಲದ ವ್ಯಕ್ತಿಗಳಿಗೆ  ಜನರನ್ನು ಪ್ರತಿನಿಧಿಸುವ ಮತ್ತು ಸರ್ಕಾರದಲ್ಲಿ ಪಾಲ್ಗೊಳ್ಳುವ ಹಕ್ಕಿಲ್ಲ ಎಂದು ನೇರ ವಾಗ್ದಾಳಿ ನಡೆಸಿದರು. ಅಂತೆಯೇ ಅನಂತ್ ಕುಮಾರ್ ಹೆಗ್ಡೆ ಅವರಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ ಎಂದಾದರೆ ಅವರಿಗೆ ಸಚಿವರಾಗುವ ಹಕ್ಕಿಲ್ಲ.  ಅಷ್ಟೇ ಅಲ್ಲ ಸಂಸತ್ ಸದಸ್ಯರಾಗಲೂ ಅರ್ಹತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಕೋಲಾಹಲ ನಡೆಯಿತು, ಅನಿವಾರ್ಯವಾಗಿ ಕಲಾಪವನ್ನು ಮುಂದೂಡಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com