ಜಿಎಸ್ ಟಿ: ರಾಜ್ಯಗಳಿಗೆ 24,500 ಕೋಟಿ ರು. ಪರಿಹಾರ ಬಿಡುಗಡೆ, ಕರ್ನಾಟಕಕ್ಕೆ ಹೆಚ್ಚು ಪಾಲು

ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ಜಾರಿ ಮಾಡಿದ ಬಳಿಕ, ಜುಲೈಯಿಂದ ಅಕ್ಟೋಬರ್ ವರೆಗೆ ರಾಜ್ಯಗಳಿಗೆ ಆದ ಆದಾಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ಜಾರಿ ಮಾಡಿದ ಬಳಿಕ, ಜುಲೈಯಿಂದ ಅಕ್ಟೋಬರ್ ವರೆಗೆ ರಾಜ್ಯಗಳಿಗೆ ಆದ ಆದಾಯ ನಷ್ಟಕ್ಕೆ ಪರಿಹಾರವಾಗಿ ಕೇಂದ್ರ ಸರ್ಕಾರ 24,500 ಕೋಟಿ ರುಪಾಯಿ ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚು ಪರಿಹಾರ ನೀಡಲಾಗಿದೆ ಎಂದು ಶುಕ್ರವಾರ ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ.
ಕಳೆದ ನವೆಂಬರ್ ಕೇಂದ್ರ ಸರ್ಕಾರ ರಾಜ್ಯಗಳಿಗೆ ಬಿಡುಗಡೆ ಮಾಡಿದ 24,500 ಕೋಟಿ ರುಪಾಯಿ ಜಿಎಸ್ ಟಿ ಪರಿಹಾರದಲ್ಲಿ ಕರ್ನಾಟಕ 3,271 ಕೋಟಿ ರುಪಾಯಿ ಪಡೆದಿದೆ. ಎರಡನೇ ಸ್ಥಾನದಲ್ಲಿರುವ ಗುಜರಾತ್ 2,282 ಕೋಟಿ ಹಾಗೂ ಮೂರನೇ ಸ್ಥಾನದಲ್ಲಿರುವ ಪಂಜಾಬ್ 2,098 ಕೋಟಿ ರುಪಾಯಿ ಪರಿಹಾರ ಪಡೆದುಕೊಂಡಿವೆ ಎಂದು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಶಿವ ಪ್ರತಾಪ್ ಶುಕ್ಲಾ ಅವರು ಇಂದು ಲೋಕಸಭೆಗೆ ಲಿಖಿತ ಉತ್ತರ ನೀಡಿದರು.
ಜಿಎಸ್ ಟಿ ಜಾರಿಯಿಂದಾಗಿ ಜುಲೈಯಿಂದ ಅಕ್ಟೋಬರ್ ವರೆಗೆ ರಾಜ್ಯಗಳಿಗೆ 24,500 ಕೋಟಿ ರುಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದ್ದು, ಅಷ್ಟೇ ಮೊತ್ತವನ್ನು ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಶುಕ್ಲಾ ಅವರು ತಿಳಿಸಿದ್ದಾರೆ.
ಜಿಎಸ್ ಟಿ. ಅಡಿಯಲ್ಲಿ ಐಷಾರಾಮಿ ಕಾರ್ ಮೊದಲಾದವುಗಳ ಮೇಲೆ ಶೇ. 28 ರಷ್ಟು ತೆರಿಗೆ ವಿಧಿಸಲಾಗುತ್ತಿದ್ದು, ಜಿಎಸ್ ಟಿ ಅನುಷ್ಠಾನದಿಂದಾಗಿ ರಾಜ್ಯಗಳ ಆದಾಯ ನಷ್ಟವನ್ನು ಸರಿದೂಗಿಸಲು ಕೇಂದ್ರ ಸರ್ಕಾರ ಈ ಕ್ರಮಕೈಗೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com